ವಿಶ್ವನಾಥ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ

ವಿಟ್ಲ,ಆ.22 : ವಿಟ್ಲ ಗ್ರಾಮೀಣ ಬ್ಯಾಂಕ್ ಮತ್ತು ಬಂಟ್ವಾಳ ಸಮಾಜ ಸೇವಾ ಬ್ಯಾಂಕ್ ನಿರ್ದೇಶಕ ಎಂ. ವಿಶ್ವನಾಥ ಅವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರ ಸಹಿತ ಸುಮಾರು ಹತ್ತು ವರ್ಷಗಳಿಗೂ ಮಿಕ್ಕಿದ ಕಾಲ ವೀರಕಂಭ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇವರನ್ನು ಬಿ.ಸಿ.ರೋಡಿನ ಗಾಣದಪಡ್ಪು ಗುರುನಾರಾಯಣ ಸಭಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಸನ್ಮಾನಿಸಿದರು.
Next Story





