Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋರಕ್ಷಣೆ ಹೆಸರಿನಲ್ಲಿ ದುಷ್ಕೃತ್ಯ...

ಗೋರಕ್ಷಣೆ ಹೆಸರಿನಲ್ಲಿ ದುಷ್ಕೃತ್ಯ ಎಸಗುತ್ತಿರುವವರ ಬಗ್ಗೆ ಎಚ್ಚರದಿಂದಿರಿ

ಸಚಿವ ರಮಾನಾಥ ರೈ ಜನತೆಗೆ ಕರೆ

ವಾರ್ತಾಭಾರತಿವಾರ್ತಾಭಾರತಿ23 Aug 2016 11:40 AM IST
share
ಗೋರಕ್ಷಣೆ ಹೆಸರಿನಲ್ಲಿ ದುಷ್ಕೃತ್ಯ ಎಸಗುತ್ತಿರುವವರ ಬಗ್ಗೆ ಎಚ್ಚರದಿಂದಿರಿ

ಮಂಗಳೂರು, ಆ.23: ಧರ್ಮ, ದೇವರ ಹೆಸರಿನಲ್ಲಿ ಕೆಲವು ಶಕ್ತಿಗಳು ಸಮಾಜದಲ್ಲಿ ಹಿಂಸೆ, ಅಶಾಂತಿ ಉಂಟು ಮಾಡುತ್ತಿರುವುದು ನೋವಿನ ವಿಚಾರ. ಗೋರಕ್ಷಣೆಯ ಹೆಸರಿನಲ್ಲಿ ನಾಗರಿಕ ಸಮಾಜದ ಸಾಮರಸ್ಯ ಕೆಡಿಸುತ್ತಿರುವುದು ಮಾತ್ರವಲ್ಲ ಇದೀಗ ಜೀವವನ್ನೇ ಬಲಿ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ. ದ.ಕ. ಮತ್ತು ಉಡುಪಿಯ ಜಿಲ್ಲೆಗಳಲ್ಲಿ ಇಂತಹ ಹಲವು ಪ್ರಕರಣಗಳು ನಡೆಯುತ್ತಿವೆ. ಇಂತಹ ದುಷ್ಟಶಕ್ತಿಗಳ ಬಗ್ಗೆ ಪ್ರಜ್ಞಾವಂತ ನಾಗರಿಕರು ಅರಿತುಕೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕೆಂಜೂರಿನ ಪ್ರವೀಣ್ ಪೂಜಾರಿ ಹತ್ಯೆಯನ್ನು ಖಂಡಿಸಿದ ಸಚಿವರು, ಇಂತಹ ಕೃತ್ಯ ಎಸಗುತ್ತಿರುವ ಅವರನ್ನು ತಾನು ಸಂಘಪರಿವಾರ ಎಂದು ಕರೆಯುವುದಿಲ್ಲ. ಅವರು 'ಚಡ್ಡಿ ಪರಿವಾರ' ಎಂದರು.
ಗೋರಕ್ಷಕರಲ್ಲಿ ಶೇ.80ರಷ್ಟು ಮಂದಿ ಕ್ರಿಮಿನಲ್ ಹಿನ್ನೆಲೆಯವರು ಎಂದು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಹೇಳಿದ್ದಾರೆ. ಆದರೆ ಇದನ್ನು ಈ ಹಿಂದೆಯೇ ನಾವು ಹೇಳಿದ್ದೇವೆ. ಕರಾವಳಿ ಜಿಲ್ಲೆಯಲ್ಲಿ ಗೋರಕ್ಷಕರು ಎಂದು ಕಾರ್ಯಾಚರಿಸುತ್ತಿರುವವರು ಬಜರಂಗ ದಳದವರು. ಇವರಲ್ಲಿ ಶೇ. 80ಕ್ಕೂ ಅಧಿಕ ಮಂದಿ ಕ್ರಿಮಿನಲ್ ಹಿನ್ನೆಲೆಯಿಂದ ಬಂದವರು ಎಂದು ಸಚಿವ ರೈ ಹೇಳಿದರು.
 
ಈ ದೇಶದಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಸಾಕಷ್ಟು ಮಂದಿ ಶಾಸಕರಾಗಿದ್ದಾರೆ. ಧರ್ಮ, ದೇಶ ಪ್ರೇಮದ ಹೆಸರನಲ್ಲಿ ಮತೀಯ ಭಾವನೆ ಕೆರಳಿಸಿ ಅಧಿಕಾರಕ್ಕೇರಿದ್ದಾರೆ. ಇದ್ನನು ಪ್ರಜ್ಞಾವಂತ ನಾಗರಿಕರು ಅರಿತುಕೊಳ್ಳಬೇಕು ಎಂದು ಜನರಿಗೆ ಕಿವಿಮಾತು ಹೇಳಿದರು. ಕೆಂಜೂರು ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐಜಿಯೊಂದಿಗೆ ಮಾತುಕತೆ ನಡೆಸುತ್ತೇನೆ. ಈ ಪ್ರಕರಣದ ತ್ವರಿತ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸುವುದಾಗಿ ಹೇಳಿದರು.
ಬಿಜೆಪಿ ರಾಷ್ಟ್ರಾಧ್ಯಕ್ಷರು ತಿರಂಗಾ ಯಾತ್ರೆ ಹೆಸರಿನಲ್ಲಿ ರಾಜಕೀಯ ವೇದಿಕೆಯಾಗಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಬಳಸಿಕೊಂಡಿರುವುದು ತಪ್ಪು. ಈ ಕುರಿತಂತೆ ವಿಶ್ವವಿದ್ಯಾನಿಲಯದ ಕೆಲವು ಸಿಂಡಿಕೇಟ್ ಸದಸ್ಯರು ಸರಕಾರಕ್ಕೆ ಪತ್ರ ಬರೆದಿದ್ದಾರೆ. ತಾನು ಕೂಡಾ ಇದನ್ನು ಸರಕಾರದ ಗಮನಕ್ಕೆ ತಂದಿದ್ದೇನೆ. ತಿರಂಗ ಯಾತ್ರೆಯ ಹೆಸರಿನಲ್ಲಿ ದೇಶದ ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಾರ್ಯ ಮಾಡುತ್ತಿದ್ದಾರೆ ಎಂದವರು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X