ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ.23: ರಾಜ್ಯದ ಜನತೆಗೆ ಕುಡಿಯಲು ನೀರಿನ ಅಭಾವ ಇದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ನಗರದ ಮುಖ್ಯಮಂತ್ರಿ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಮಾಡಲು ತಮಿಳುನಾಡು ಸರಕಾರ ಕಾವೇರಿ ನೀರಿಗೆ ಒತ್ತಾಯಿಸುತ್ತಿದೆ. ಆದರೆ, ನಮಗೆ ಕುಡಿಯುವುದಕ್ಕೆ ನೀರಿಲ್ಲ. ಅಂತಹದರಲ್ಲಿ ನೀರು ಬಿಡುವ ಮಾತೇ ಇಲ್ಲ ಎಂದು ತಿಳಿಸಿದರು. ಕರ್ನಾಟಕದಲ್ಲಿರುವ ನಾಲ್ಕು ಕಾವೇರಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀರ ಕಡಿಮೆಯಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡು ಸರಕಾರ 50ಟಿಎಂಸಿ ನೀರಿಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಇಷ್ಟು ನೀರನ್ನು ಬಿಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.
Next Story





