Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೇರಿಕೋಮ್‌ರಿಂದ ಸರಿತಾದೇವಿ ತನಕ.....

ಮೇರಿಕೋಮ್‌ರಿಂದ ಸರಿತಾದೇವಿ ತನಕ.. ಪ್ರತಿಯೊಬ್ಬರ ಮಾರ್ಗದರ್ಶಕ ಸಾಗರ್ ದಯಾಳ್

ವಾರ್ತಾಭಾರತಿವಾರ್ತಾಭಾರತಿ23 Aug 2016 11:35 PM IST
share
ಮೇರಿಕೋಮ್‌ರಿಂದ ಸರಿತಾದೇವಿ ತನಕ.. ಪ್ರತಿಯೊಬ್ಬರ ಮಾರ್ಗದರ್ಶಕ ಸಾಗರ್ ದಯಾಳ್

 ಹೊಸದಿಲ್ಲಿ, ಆ.23: ಕಳೆದ ಹತ್ತು ವರ್ಷಗಳ ವೃತ್ತಿಜೀವನದಲ್ಲಿ ಐದು ಬಾರಿಯ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ ಮೇರಿಕೋಮ್ ಹಾಗೂ ಮಾಜಿ ವಿಶ್ವ ಚಾಂಪಿಯನ್ ಎಲ್. ಸರಿತಾದೇವಿ ಸಹಿತ ಹಲವು ಮಹಿಳಾ ಬಾಕ್ಸರ್‌ಗಳಿಗೆ ಮಾರ್ಗದರ್ಶಕರಾಗಿದ್ದ ಸಾಗರ್ ಮಾಲ್ ದಯಾಳ್ ಈ ವರ್ಷದ ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 ಜೈಪುರ ಮೂಲದ ದಯಾಳ್ ರಾಷ್ಟ್ರೀಯ ಕ್ರೀಡಾದಿನವಾದ ಆಗಸ್ಟ್ 29 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ದಯಾಳ್ 1995ರಲ್ಲಿ ಕೋಚ್ ಆಗುವ ಮೊದಲು ಓರ್ವ ಬಾಕ್ಸರ್ ಆಗಿದ್ದರು. 20 ವರ್ಷಗಳ ಕಾಲ ಭಾರತೀಯ ರೈಲ್ವೆಯಲ್ಲಿದ್ದ ದಯಾಳ್ 10 ವರ್ಷಗಳ ಹಿಂದೆ ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್ ತಂಡಕ್ಕೆ ಸಪೋರ್ಟ್ ಸ್ಟಾಫ್ ಆಗಿ ಸೇರಿಕೊಂಡರು.

‘‘ಈ ಗೌರವಕ್ಕೆ ನಾನು ಕೃತಜ್ಞತೆ ಸಲ್ಲಿಸುವೆ. ನಾನು ಈ ಗೌರವಕ್ಕೆ ಅರ್ಹನೆಂದು ಮಹಿಳಾ ಬಾಕ್ಸರ್‌ಗಳು ನಂಬಿದ್ದಾರೆ. ಮೇರಿಕೋಮ್‌ರಿಂದ ಪಿಂಕಿ ರಾಣಿ ತನಕ ಹಲವು ಮಹಿಳಾ ಬಾಕ್ಸರ್‌ಗಳಿಗೆ ನಾನು ಕೋಚಿಂಗ್ ನೀಡಿದ್ದೇನೆ’’ ಎಂದು ಪಿಟಿಐಗೆ ನೀಡಿರುವ ಸಂದರ್ಶನವೊಂದರಲ್ಲಿ ದಯಾಳ್ ತಿಳಿಸಿದರು.

2014ರ ಏಷ್ಯನ್ ಗೇಮ್ಸ್‌ನಲ್ಲಿ ಸರಿತಾದೇವಿ ವಿವಾದಾತ್ಮಕ ಸೆಮಿಫೈನಲ್ ಸೋಲಿನ ಬಳಿಕ ಕಂಚಿನ ಪದಕ ಸ್ವೀಕರಿಸಲು ನಿರಾಕರಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದಾಗ ದಯಾಳ್ ಅವರು ಸರಿತಾರ ಬೆಂಬಲಕ್ಕೆ ನಿಂತಿದ್ದರು.

 ‘‘ಅದೊಂದು ಬೇಸರದ ಅಧ್ಯಾಯವಾಗಿತ್ತು. ಆಗ ನನಗೂ ತುಂಬಾ ಬೇಸರವಾಗಿತ್ತು. ನಾನು ಸರಿತಾರ ಕೋಚ್ ಆಗಿರುವ ಕಾರಣ ನನಗೆ ಜವಾಬ್ದಾರಿಯಿತ್ತು. ಆಕೆ ನಿಜವಾಗಲೂ ‘ಜಂಟಲ್‌ವುಮೆನ್’ ಎಂದು ದಯಾಳ್ ಹೇಳಿದ್ದಾರೆ.

ಪದಕ ನಿರಾಕರಿಸಿದ್ದಕ್ಕೆ ಸರಿತಾ ಒಂದುವರ್ಷ ನಿಷೇಧಕ್ಕೆ ಗುರಿಯಾಗಿದ್ದರೆ, ದಯಾಳ್ ಶಿಸ್ತುಕ್ರಮ ಎದುರಿಸಿದ್ದರು. ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ ದಯಾಳ್ ರನ್ನು ದೋಷಮುಕ್ತಗೊಳಿಸಿತ್ತು.

 ಮೇರಿಕೋಮ್‌ಗೆ ಕೋಚಿಂಗ್ ನೀಡಿದ ಬಗ್ಗೆ ಮಾತನಾಡಿದ ದಯಾಳ್, ‘‘ಮಣಿಪುರದ ಬಾಕ್ಸರ್ 2010ರಲ್ಲಿ ಐದನೆ ಬಾರಿ ವಿಶ್ವ ಚಾಂಪಿಯನ್‌ಶಿಪ್ ಜಯಿಸಿದ್ದನ್ನು ನೋಡಿರುವುದು ನಿಜಕ್ಕೂ ಸ್ಮರಣೀಯ ಕ್ಷಣವಾಗಿತ್ತು’’ ಎಂದರು.

‘‘ದೇಶದಲ್ಲಿ ಬಾಕ್ಸಿಂಗ್ ಫೆಡರೇಶನ್ ಅಸ್ತಿತ್ವದಲ್ಲಿ ಇರುತ್ತಿದ್ದರೆ, ಮೇರಿ ಹಾಗೂ ಸರಿತಾ ರಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುತ್ತಿದ್ದರು. ನಾವು ಆದಷ್ಟು ಬೇಗನೆ ಬಾಕ್ಸಿಂಗ್‌ನ ಸಮಸ್ಯೆಯನ್ನು ನಿವಾರಿಸಿಕೊಳ್ಳಬೇಕಾಗಿದೆ. ನನ್ನ ಶಿಷ್ಯೆ ಮೇರಿಕೋಮ್ ರಾಜ್ಯಸಭಾ ಸದಸ್ಯೆಯಾಗಿದ್ದು, ಆಕೆ ಎಲ್ಲ ಸಮಸ್ಯೆಯನ್ನು ನಿವಾರಿಸುತ್ತಾರೆಂಬ ವಿಶ್ವಾಸವಿದೆ’’ ಎಂದು ದಯಾಳ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X