ಮುಖ್ಯಕಾರ್ಯದರ್ಶಿ ವಿರುದ್ಧಎಸಿಬಿಗೆ ದೂರು
ಬೆಂಗಳೂರು, ಆ.23: ನಕಲಿ ದಾಖಲೆ ಸೃಷ್ಟಿಸಿ ಸರಕಾರಿ ಭೂಮಿಯನ್ನು ತಮ್ಮ ತಾಯಿಯ ಹೆಸರಿಗೆ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ವಿರುದ್ಧ ಎಸಿಬಿಗೆ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ.
ಮಂಗಳವಾರ ನಗರದ ರೇಸ್‌ಕೋರ್ಸ್ ರಸ್ತೆಯ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪ್ರಧಾನ ಕಚೇರಿಗೆ ಆರ್‌ಟಿಐ ಕಾರ್ಯಕರ್ತ ಎಸ್. ಭಾಸ್ಕರನ್ ಎಂಬವರು ಭೇಟಿ ನೀಡಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರ ವಿರುದ್ಧ ದೂರು ಪ್ರತಿ ಸಲ್ಲಿಸಿದರು.
ಎಸಿಬಿಗೆ ದೂರು ನೀಡಿದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ತಾಯಿ ತಾರಾಬಾಯಿ ಹೆಸರಲ್ಲಿ ಸರಕಾರಿ ಭೂಮಿ ಕಬಳಿಸಿದ್ದಾರೆ. ಈ ಸಂಬಂಧ ಎಸಿಬಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ ಎಂದರು ಹೇಳಿದರು.
Next Story





