ಇಟಲಿಯಲ್ಲಿ ಭೂಕಂಪ : ಇಬ್ಬರು ಸಾವು

ನಾರ್ಸಿಯಾ, ಆ.24: ಇಟಲಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೂಕಂಪದ ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದಾರೆ. ಕಟ್ಟಡ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ.
ಪೆರುಗಿಯಾ ನಗರದಲ್ಲಿ 6.5 ಅಂಕಗಳ ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ. ಭೂಕಂಪದ ಪರಿಣಾಮವಾಗಿ ಸೇತುವೆಯೊಂದು ಕುಸಿದು ಬಿದ್ದಿದೆ.
2009ರಲ್ಲಿ ಇದೇ ನಗರದಲ್ಲಿ ಸಂಭವಿಸಿದ ಭೂಕಂಪದಿಂದಾಗಿ 300 ಮಂದಿ ಮೃತಪಟ್ಟಿದ್ದರು.
Next Story





