ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ: ಕಮಿಷನರ್
_0.jpg)
ಮಂಗಳೂರು, ಆ.24: ವಾಟ್ಸ್‌ಆಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್ ತಿಳಿಸಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಐಪಿಸಿ 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.
Next Story





