ಬಿಜೆಪಿ ಕಚೇರಿಗೆ ಕೇಂದ್ರ ಸಚಿವರ ಭೇಟಿ
.jpg)
ಮಂಗಳೂರು, ಆ. 24: ಕುಡಿಯುವ ನೀರು ಹಾಗೂ ನೈರ್ಮಲ್ಯ, ರಾಜ್ಯ ಖಾತೆ ಸಚಿವ ರಮೇಶ್ ಜಿಗಜಿಣಗಿ ಇಂದು ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಅವರು ದ.ಕ.ಜಿಲ್ಲೆಗೆ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿ 60 ಕೋ. ರೂ. ಅನುದಾನಕ್ಕೆ ಮನವಿ ಸಲ್ಲಿಸಿದರು. ಸಚಿವರು ಕೂಡಲೇ ಸ್ಪಂದಿಸಿ ತುರ್ತು ಕ್ರಮದ ಭರವಸೆ ನೀಡಿದರು.
ಜಿಲ್ಲಾ ಪ್ರಮುಖರಾದ ಕೆ.ಮೋನಪ್ಪ ಭಂಡಾರಿ, ರವಿಶಂಕರ್ ಮಿಜಾರ್, ಸಂಜಯ್ ಪ್ರಭು, ಕ್ಯಾ.ಬ್ರಿಜೇಶ್ ಚೌಟ, ವೇದವ್ಯಾಸ ಕಾಮತ್, ರವಿಚಂದ್ರ, ಸದಾನಂದ ನಾವುರ, ಗುರುಚರಣ್, ಸೂರಜ್ ಮುಂತಾದವರು ಉಪಸ್ಥಿತರಿದ್ದರು.
Next Story





