ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ : ನಯನಾ ಶ್ರೀಪಾದ
ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ

ಸೊರಬ, ಆ.24: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗುವುದರಿಂದ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿರಲು ಸಾಧ್ಯವಾಗುತ್ತದೆ ಎಂದು ತಾಪಂ ಅಧ್ಯಕ್ಷೆ ನಯನಾ ಶ್ರೀಪಾದ ಹೆಗಡೆ ಹೇಳಿದರು. ಬುಧವಾರ ತಾಲೂಕಿನ ಜಡೆ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಪಂ, ತಾಪಂ, ಶಿಕ್ಷಣ ಇಲಾಖೆ, ಕ್ಷೇತ್ರ
ಶಿಕ್ಷಣಾಧಿಕಾರಿಗಳ ಕಚೇರಿ, ಜಡೆ ಗ್ರಾಪಂ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು, ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದ ಅವರು, ತಾಲೂಕು ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರಿದ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳು ಜಿಲ್ಲಾ ಮತ್ತು ರಾಜ್ಯಮಟ್ಟವನ್ನು ಪ್ರತಿನಿಧಿಸಲಿ ಎಂದು ಹಾರೈಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ್ ಕೊಟಗಿ, ಗ್ರಾಮೀಣ ಭಾಗದಲ್ಲಿ ಅನೇಕ ಜನಪದ ಕಲೆಗಳು ನಶಿಸುತ್ತಿವೆ. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಕಲೆಗಳು ಉಳಿಯುವ ಜೊತೆಗೆ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ಶಿವಲಿಂಗೇ ಗೌಡ, ತಾಪಂ ಉಪಾಧ್ಯಕ್ಷ ಸುರೇಶ್ ಹಾವಣ್ಣಬನವರ್, ಸದಸ್ಯೆ ಅಂಜಲಿ ಸಂಜೀವ ಲಕ್ಕವಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಆಂಜನೇಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಸಿ. ಶಿವಕುಮಾರ್, ಸಂಪತ್‌ಕುಮಾರ್, ಶಿಕ್ಷಣ ಸಂಯೋಜಕ ಪ್ರೇಮ್‌ಕುಮಾರ್, ಪ್ರಕಾಶ್ ಮಡ್ಲೂರು, ಅನ್ವರ್ ಬಾಷಾಮುಲ್ಲಾ, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದು.







