Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದೇಶದ ಅಭಿವೃದ್ಧಿಗಾಗಿ ಒಂದಾಗೋಣ...

ದೇಶದ ಅಭಿವೃದ್ಧಿಗಾಗಿ ಒಂದಾಗೋಣ :ಐಎಸ್‌ಎಫ್ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ಆನಂದ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Aug 2016 10:50 PM IST
share
ದೇಶದ ಅಭಿವೃದ್ಧಿಗಾಗಿ ಒಂದಾಗೋಣ :ಐಎಸ್‌ಎಫ್ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ಆನಂದ್ ಕುಮಾರ್

ಸೌದಿ ಅರೇಬಿಯಾ-ಜಿದ್ದಾ:  ಇಂಡಿಯನ್ ಸೊಶಿಯಲ್ ಫಾರಂ ಜಿದ್ದಾ ಕೇಂದ್ರ ಸಮಿತಿ ವತಿಯಿಂದ 70ನೇ ಸ್ವಾತಂತ್ರ್ಯ ಸಂಭ್ರಮವು ಜಿದ್ದಾದ ಇಂಫಾಲ ಗಾರ್ಡನ್ ಸಂಭಾಗಣದಲ್ಲಿ (19-08-2016) ಶುಕ್ರವಾರ ರಾತ್ರಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಾರತೀಯ ರಾಯಭಾರಿ ಕಚೇರಿ ಜಿದ್ದಾ ಇದರ ಪಾಸ್ ಪೋರ್ಟ್‌ ವಿಭಾಗದ ಮುಖ್ಯಸ್ಥ ಆನಂದ್ ಕುಮಾರ್ ಮಾತನಾಡಿ, ದೇಶದ ಎಲ್ಲಾ ಜಾತಿ, ಧರ್ಮ, ಜನಾಂಗಗಳ ಜನರು ಒಂದಾಗಿ ಹೋರಾಡಿದ್ದರಿಂದಾಗಿ ದೇಶವು ಸ್ವಾತಂತ್ರ್ಯವನ್ನು ಪಡೆಯಲು ಸಾಧ್ಯವಾಯಿತು. ದೇಶದ ಅಭಿವೃದ್ಧಿಗಾಗಿ ನಾವೆಲ್ಲರೂ ಇದೇ ರೀತಿಯ ಒಗ್ಗಟ್ಟಿನ ಪ್ರಯತ್ನವನ್ನು ಮುಂದುವರಿಸಬೇಕಾಗಿದೆ. ಹೀಗೆ ದೇಶದ ಎಲ್ಲಾ ಜನರು ಒಂದಾದರೆ ಯಾವುದೇ ಹೊರಗಿನ ಅಥವಾ ಒಳಗಿನ ಶಕ್ತಿಗಳಿಗೆ ದೇಶವನ್ನು ಒಡೆಯುವುದು ಸಾಧ್ಯವಿಲ್ಲ ಎಂದರು.

ಇಂಡಿಯಾ ಫ್ರೆಟರ್ನಿಟಿ ಫಾರಂ ಜಿದ್ದಾ ಇದರ ಮುಖ್ಯಸ್ಥ ಅಬ್ದುಲ್ ಹಕೀಂ ಮಾತನಾಡಿ, ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಸ್ವಾತಂತ್ರ್ಯ ಸೇನಾನಿಗಳ ತ್ಯಾಗ, ಬಲಿದಾನವನ್ನು ನೆನಪಿಸಿದರು. ಭಾರತವು ಬ್ರಿಟೀಷರಿಂದ ಸ್ವಾತಂತ್ರ್ಯಗೊಂಡು 70 ವರ್ಷಗಳೇ ಸಂದರೂ ದೇಶದ ಎಲ್ಲಾ ಪ್ರಜೆಗಳು ಈ ಸ್ವಾತಂತ್ರ್ಯದ ಫಲವನ್ನು ಅನುಭವಿಸದೇ ಇರುವುದು ವಾಸ್ತವವಾಗಿದೆ. ಇಂದಿಗೂ ದೇಶದ ಬಹುದೊಡ್ಡ ವರ್ಗವೂ ತಾರತಮ್ಯಕ್ಕೊಳಗಾಗಿದೆ. ದಲಿತ-ಮುಸ್ಲಿಂ ಹಾಗೂ ಅದಿವಾಸಿ ಜನರು ಸಂವಿಧಾನವು ನೀಡಿದ ಯಾವುದೇ ಹಕ್ಕುಗಳು ದೊರೆಯದೆ ಜೀವಿಸುತ್ತಿದ್ದಾರೆ. ದೇಶದ ಈ ಪರಿಸ್ಥಿತಿಯನ್ನು ಬದಲಾಯಿಸುವುದು ಇಂದಿನ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಇಂಡಿಯನ್ ಸೋಶಿಯಲ್ ಫಾರಂ ನ ಕೇಂದ್ರ ಸಮಿತಿ ಉಪಾಧ್ಯಕ್ಷ ಇ.ಎಂ ಅಬ್ದುಲ್ಲಾ, ಇಘ್ನೋ ದ ಪ್ರಧಾನ ವ್ಯಾಪಸ್ಥಾಪಕ ರಿಯಾರ್ ಮುಲ್ಲಾ, ಶಿವಮೊಗ್ಗ ವೆಲ್‌ಫೇರ್ & ಎಜಕೇಶನ್ ಸೊಸೈಟಿಯ ಅಧ್ಯಕ್ಷ ಮುಖ್ತಾರ್ ಅಹ್ಮದ್, ಜಿದ್ದಾ ತಮಿಳ್ ಸಂಘಂ ನ ಕಾರ್ಯಕಾರಿ ಸಮಿತಿ ಸದಸ್ಯ ಗಣೇಶನ್, ಇಂಡಿಯಾ ಫಾರಂ ನ ಪ್ರ. ಕಾರ್ಯದರ್ಶಿ ಅಯ್ಯೂಬ್, ಇಂಡಿಯಾ ಸೋಶಿಯಲ್ ಫಾರಂ ಜಿದ್ದಾ ಇದರ ತಮಿಳುನಾಡು ಘಟಕಾಧ್ಯಕ್ಷ ಫಯಾರ್, ಕರ್ನಾಟಕ ಘಟಕಾಧ್ಯಕ್ಷ ಹಾರಿಸ್, ಕೇರಳ ಘಟಕಾಧ್ಯಕ್ಷ ಹನೀಫ್ ಹಾಗೂ ಇನ್ನಿತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X