ನಾಳೆ ‘ಇ-ವೇಸ್ಟ್ ಸಂಗ್ರಹಣಾ ಘಟಕ’ಗಳಿಗೆ ಚಾಲನೆ
ಮಂಗಳೂರು, ಆ.24: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಮನಪಾ, ಎನ್.ಐ.ಟಿ.ಕೆ ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಳವಡಿಸಲಾಗಿರುವ ಎಲೆಕ್ಟ್ರಾನಿಕ್ ತ್ಯಾಜ್ಯಗಳ ಸಂಗ್ರಹಣಾ ಘಟಕಗಳ ಉದ್ಘಾಟನೆ ಆ.26ರಂದು ಬೆಳಗ್ಗೆ 10 ಗಂಟೆಗೆ ಮನಪಾ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಘಟಕಗಳನ್ನು ಉದ್ಘಾಟಿಸಲಿದ್ದು, ಬಳಿಕ ಎಲೆಕ್ಟ್ರಾನಿಕ್ ತ್ಯಾಜ್ಯಗಳ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





