ಮುಖ್ಯ ಕಾರ್ಯದರ್ಶಿ ರಕ್ಷಿಸುವ ಪ್ರಶ್ನೆಯೇ ಇಲ್ಲ: ಕಾನೂನು ಸಚಿವ ಜಯಚಂದ್ರ
ಬೆಂಗಳೂರು, ಆ.24: ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಸೇರಿದಂತೆ ಯಾರೊಬ್ಬರನ್ನು ರಕ್ಷಿಸುವ ಅಗತ್ಯ ರಾಜ್ಯ ಸರಕಾರಕ್ಕಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಟಿ.ಬಿ.ಜಯಚಂದ್ರ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಅಕಾರಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಸರಕಾರದ ಮುಖ್ಯ ಕಾರ್ಯದರ್ಶಿ ತಮ್ಮ ತಾಯಿ ಹೆಸರಿನಲ್ಲಿ ಭೂಮಿ ಖರೀದಿಸಿರುವ ಸಂಬಂಧ ಈಗಾಗಲೇ ಜಿಲ್ಲಾಕಾರಿಗಳಿಗೆ ವರದಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು, ವರದಿ ಬಂದ ಬಳಿಕ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಯಚಂದ್ರ ಹೇಳಿದರು.ರ ಜನವರಿ 7ರಿಂದ ಮೂರು ದಿನಗಳ ಕಾಲ ‘ಭಾರತೀಯ ಪ್ರವಾಸಿ ದಿವಸ್’ ಕಾರ್ಯಕ್ರಮ ಆಯೋಜಿಸಲು 20 ಕೋಟಿ ರೂ. ಅನುದಾನ ಬಿಡುಗಡೆಗೆ ಸಂಪುಟ ಅನುಮೋದನೆ ನೀಡಿದೆ. ಹೈಕೋರ್ಟ್‌ನ ಅಕಾರಿ ಹಾಗೂ ನೌಕರರಿಗೆ ಕೇಂದ್ರ ವೇತನ ಶ್ರೇಣಿ ನೀಡುವ ಕುರಿತಂತೆ ಸಂಪುಟ ಉಪ ಸಮಿತಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.
ಜನರಿಗೆ ತೊಂದರೆ ಆಗದಂತೆ ಎಲ್ಲರಿಗೂ ಕೈಗೆಟುಕುವ ದರದಲ್ಲಿ ಮರಳು ದೊರೆಯುವಂತೆ ಮಾಡಲು ಎಂ ಸ್ಯಾಂಡ್ ಘಟಕ ಸ್ಥಾಪನೆಗೆ ಅನುಮತಿ ನೀಡುವ ಅಕಾರವನ್ನು ಜಿಲ್ಲಾಡಳಿತಗಳಿಗೆ ನೀಡಲಾಗಿದೆ. ಈ ಸಂಬಂಧ ಆ.12ರಂದು ಅಸೂಚನೆ ಹೊರಡಿಸಿದ್ದು, ಈ ಅಸೂಚನೆ ಕಡ್ಡಾಯವಾಗಿ ಪಾಲಿಸಲು ಆದೇಶಿಸಲಾಗಿದೆ. ಈ ಕುರಿತಂತೆ ಶೀಘ್ರದಲ್ಲೆ ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದರು.





