ಜನಸಂಪರ್ಕ ಸಭೆ: ಅಹವಾಲು ಸ್ವೀಕರಿಸಲು ವಿಶೇಷ ಕೌಂಟರ್
ಮಂಗಳೂರು, ಆ.24: ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯು ಸೆ.3ರಂದು ಪೂ.11ಕ್ಕೆ ವಿಟ್ಲ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಗೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬಂಟ್ವಾಳ ತಾಲೂಕು ಕಚೇರಿಯಲ್ಲಿ ಸ್ಥಾಪಿಸಿರುವ ವಿಶೇಷ ಕೌಂಟರ್‌ನಲ್ಲಿ ಮುಂಚಿತವಾಗಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





