Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಕ್ಷಯ ರೋಗಿಗಳ ಸಂಖ್ಯೆ ಅಂದಾಜಿನ...

ಭಾರತದ ಕ್ಷಯ ರೋಗಿಗಳ ಸಂಖ್ಯೆ ಅಂದಾಜಿನ ದುಪ್ಪಟ್ಟು!

ಲ್ಯಾನ್ಸೆಟ್ ವರದಿ

ವಾರ್ತಾಭಾರತಿವಾರ್ತಾಭಾರತಿ25 Aug 2016 8:51 AM IST
share
ಭಾರತದ ಕ್ಷಯ ರೋಗಿಗಳ ಸಂಖ್ಯೆ ಅಂದಾಜಿನ ದುಪ್ಪಟ್ಟು!

ಮುಂಬೈ, ಆ.25: ಭಾರತವನ್ನು ದುಃಸ್ವಪ್ನವಾಗಿ ಕಾಡುತ್ತಿರುವ ಕ್ಷಯರೋಗದ ಸಮಸ್ಯೆ ಅಂದಾಜಿಸಿದ್ದಕ್ಕಿಂತಲೂ ಭಯಾನಕವಾಗಿದೆ. ದೇಶಾದ್ಯಂತ ಮಾರಾಟವಾಗುವ ಕ್ಷಯ ನಿರೋಧಕ ಔಷಧಿಯ ವಿಶ್ಲೇಷಣೆ ನಡೆಸಿ ಸಿದ್ಧಪಡಿಸಿದ ಒಂದು ವರದಿ, ದೇಶದಲ್ಲಿ ಕ್ಷಯರೋಗಿಗಳ ಸಂಖ್ಯೆ ಅಂದಾಜಿಸಿದ್ದಕ್ಕಿಂತ ಎರಡು ಪಟ್ಟು ಇದೆ ಎಂಬ ಅಂಶವನ್ನು ಬಹಿರಂಗಪಡಿಸಿದೆ.
ಭಾರತದಲ್ಲಿ ಪ್ರತಿ ವರ್ಷ ಸುಮಾರು 22 ಲಕ್ಷ ಮಂದಿಗೆ ಕ್ಷಯ ರೋಗ ಬಾಧಿಸುತ್ತದೆ ಎಂದು ಅಂದಾಜು ಮಾಡಲಾಗಿದೆ. ಲ್ಯಾನ್ಸೆಟ್ ಸೋಂಕು ರೋಗ ನಿಯತಕಾಲಿಕ ಗುರುವಾರ ಪ್ರಕಟಿಸಿದ ಅಧ್ಯಯನ ವರದಿಯೊಂದು, 2014ರ ವೇಳೆಗೆ ಈ ಪ್ರಮಾಣ 38 ಲಕ್ಷ ಎಂದು ಅಂದಾಜು ಮಾಡಿದೆ. ಇದು ಔಷಧಿ ಸಂವೇದನೆಯ ಕ್ಷಯ ಪ್ರಕರಣಗಳಾಗಿದ್ದು, ಔಷಧ ನಿರೋಧಕ ಸಾಮರ್ಥ್ಯ ಹೊಂದಿರುವ ಕ್ಷಯರೋಗಿಗಳ ಸಂಖ್ಯೆ ಇದರಿಂದ ಹೊರತಾಗಿದೆ ಎಂದು ವರದಿ ಹೇಳಿದೆ.
ಈ ಅಧ್ಯಯನವನ್ನು ಭಾರತ ಸರ್ಕಾರ, ಲಂಡನ್‌ನ ಇಂಪೀರಿಯಲ್ ಕಾಲೇಜು, ಬಿಲ್ ಆಂಡ್ ಮಿಲಿಂಡಾ ಗೇಟ್ಸ್ ಫೌಂಡೇಷನ್ ಜಂಟಿಯಾಗಿ ನಡೆಸಿದ್ದವು. ಭಾರತದಲ್ಲಿ ಅಂದಾಜು ಪ್ರಮಾಣಕ್ಕಿಂತ ಅಧಿಕ ರೋಗಿಗಳು, ಸರ್ಕಾರಿ ವ್ಯವಸ್ಥೆ ಬದಲಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಊಹೆಯನ್ನು ಈ ಹಿಂದೆಯೇ ವ್ಯಕ್ತಪಡಿಸಲಾಗಿತ್ತು.
ಈ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರೀಯ ಕ್ಷಯ ನಿಯಂತ್ರಣ ವಿಭಾಗದ ಮುಖ್ಯಸ್ಥ ಡಾ.ಸುನೀಲ್ ಕಪಾರ್ಡೆ, "ಖಾಸಗಿ ಆಸ್ಪತ್ರೆಗಳಿಗೆ ಬರುವ ಕ್ಷಯ ರೋಗಿಗಳ ಸಂಖ್ಯೆಯನ್ನು ನಾವು ಕೀಳಂದಾಜು ಮಾಡಿದ್ದೇವೆ. ಆದರೆ ಔಷಧಿ ಮಾರಾಟದ ಹಿನ್ನೆಲೆಯಲ್ಲಿ ಕೈಗೊಂಡ ಹೊಸ ಅಧ್ಯಯನದಿಂದ ತಿಳಿದು ಬಂದಿರುವಂತೆ ಖಾಸಗಿ ಚಿಕಿತ್ಸೆ ಪಡೆಯುವ ರೋಗಿಗಳೇ ಸುಮಾರು 22 ಲಕ್ಷ ಇರಬಹುದು. ನಾವು 8 ಲಕ್ಷ ಎಂದು ಈ ಮೊದಲು ಅಂದಾಜಿಸಿದ್ದೆವು" ಎಂದು ಹೇಳಿದ್ದಾರೆ. ಈ ಪ್ರಮಾಣ ಖಾಸಗಿಯಾಗಿ ಕ್ಷಯಕ್ಕೆ ಚಿಕಿತ್ಸೆ ಪಡೆಯುವವರ ಸಂಖ್ಯೆಯ ಅಂದಾಜಿನ ಮೂರು ಪಟ್ಟು ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X