ಕಾರ್ಪೊರೇಟರ್ ಅಝೀಝ್ ಕುದ್ರೋಳಿ ಕಾಂಗ್ರೆಸ್ಸಿಗೆ ?
.jpg)
ಮಂಗಳೂರು,ಆ.25 ಮಂಗಳೂರು ಮಹಾನಗರ ಪಾಲಿಕೆಯ ಕುದ್ರೋಳಿ ವಾರ್ಡಿನ ಕಾರ್ಪೊರೇಟರ್ ಅಬ್ದುಲ್ ಅಝೀಝ್‍ರವರು ಕಾಂಗ್ರೆಸ್ ಪಕ್ಷ ಸೇರಲು ರಂಗ ಸಜ್ಜಾಗುತ್ತಿದೆ ಎಂದು ಹೇಳಲಾಗುತ್ತಿದ್ದೆ.
ಪಾಲಿಕೆಯಲ್ಲಿ ಸತತ ಎರಡನೇ ಬಾರಿಗೆ ಜಾತ್ಯಾತೀತ ಜನತಾ ದಳದಿಂದ ಆರಿಸಿ ಬಂದಿರುವ ಅಝೀಝ್ ಕುದ್ರೋಳಿ ವಾರ್ಡಿನಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದು ಪಕ್ಷ ಭೇದವಿಲ್ಲದೆ ಎಲ್ಲರ ಬೆಂಬಲ ಪಡೆದವರಾಗಿದ್ದಾರೆ.
ಈ ಹಿಂದೆ ಜಾತ್ಯಾತೀತ ಜನತಾ ದಳದಲ್ಲಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜರವರ ನಿಕಟವರ್ತಿ ಆಗಿದ್ದ ಅಝೀಝ್‍ರವರು ಇದೀಗ ಅವರ ನೇತೃತ್ವದಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಲಿದ್ದಾರೆ ಎನ್ನಲಾಗಿದೆ. ಮಂಗಳೂರಿನ ತಲೆಹೊರೆ ಕಾರ್ಮಿಕರ ಸಂಘಟನೆಯಲ್ಲಿ ಈಗಲೂ ಐವನ್ ಡಿಸೋಜ ಹಾಗೂ ಅಝೀಝ್ ಒಟ್ಟಾಗಿ ಸೇವೆ ಸಲ್ಲಿಸುತ್ತಿದ್ದು ಈ ಗೆಳತನವೇ ಈಗ ಅಝೀಝ್ ಕಾಂಗ್ರೆಸ್ ಸೇರಲು ಕಾರಣವಾಗಿದೆ. ಅಝೀಝ್ ರವರ ಕಾಂಗ್ರೆಸ್ ಸೇರ್ಪಡೆಗೆ ಸ್ಥಳೀಯ ಕಾಂಗ್ರೆಸ್ ಹಿರಿಯ ನಾಯಕರು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ: ಅಝೀಝ್
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವದಂತಿ ಹಿನ್ನೆಲೆಯಲ್ಲಿ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಕಾರ್ಪೊರೇಟರ್ ಅಬ್ದುಲ್ ಅಝೀಝ್, ಈ ಬಗ್ಗೆ ನನಗೆ ಕಾಂಗ್ರೆಸ್‌ನಿಂದ ಆಹ್ವಾನ ಬಂದಿದ್ದು, ಜೆಡಿಎಸ್ ಕಾರ್ಯಕರ್ತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಕಾರ್ಪೊರೇಟ್ ಆಗಿ ಚುನಾಯಿತನಾಗಿದ್ದು, ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ನಾನು ಆಸಕ್ತಿ ಹೊಂದಿಲ್ಲ. ಆದರೂ ಈ ಬಗ್ಗೆ ಕಾಂಗ್ರೆಸ್ ನಾಯಕರಿಂದ ಪಕ್ಷ ಸೇರ್ಪಡೆಗೆ ಆಹ್ವಾನ ಬರುತ್ತಿದೆ. ಆದರೆ, ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸದೆ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.







