ಬಂಟ್ವಾಳ : ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ, ಆ. 25: ಕೃಷಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಅಳಿಕೆ ಗ್ರಾಮದ ಎರುಂಬು ಎಂಬಲ್ಲಿ ಗುರುವಾರ ಸಂಭವಿಸಿದೆ.
ಇಲ್ಲಿನ ನಿವಾಸಿ ಸಂಕಪ್ಪ ಶೆಟ್ಟಿ ಎಂಬವರ ಪುತ್ರ ರವೀಂದ್ರ ಶೆಟ್ಟಿ(48) ಮೃತರಾದ ಕೃಷಿಕ. ಇವರು ತನ್ನ ಮನೆಯ ಸಮೀಪದ ತೋಟವೊಂದರಲ್ಲಿ ಕೆಲಸ ಮಾಡಿ ಕೈಕಾಲು ತೊಳೆಯಲೆಂದು ಕೆರೆಯ ಬದಿಗೆ ತೆರಳಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





