Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನನ್ನ ಮಗನ ಹಂತಕರು ಆತ ದಲಿತನಲ್ಲ ಎಂದು...

‘ನನ್ನ ಮಗನ ಹಂತಕರು ಆತ ದಲಿತನಲ್ಲ ಎಂದು ಸಾಧಿಸಲು ಯತ್ನಿಸುತ್ತಿದ್ದಾರೆ’

ವಾರ್ತಾಭಾರತಿವಾರ್ತಾಭಾರತಿ25 Aug 2016 11:07 PM IST
share

ಹೊಸದಿಲ್ಲಿ,ಆ.25: ತನ್ನ ಪುತ್ರ ರೋಹಿತ್ ವೇಮುಲಾನನ್ನು ದಲಿತನಲ್ಲ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.ಇದು ಆತನ ಸಾವಿಗೆ ಕಾರಣರಾದವರನ್ನು ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧದ ಕಠೋರ ಕಾನೂನಿನ ಹಿಡಿತದಿಂದ ರಕ್ಷಿಸುವ ಮತ್ತು ಜಾತಿ ವಿರೋಧಿ ಚಳವಳಿಯನ್ನು ದುರ್ಬಲಗೊಳಿಸುವ ರಾಜಕೀಯ ಒಳಸಂಚಾಗಿದೆ ಎಂದು ರಾಧಿಕಾ ವೇಮುಲಾ ಗುರುವಾರ ಇಲ್ಲಿ ಹೇಳಿದರು. ಹೈದರಾಬಾದ್ ವಿವಿಯ ಸಂಶೋಧನಾ ವಿದ್ಯಾರ್ಥಿ ರೋಹಿತ್ ಸಾವಿಗೆ ಸಂಬಂಧಿಸಿದಂತೆ ಸರಕಾರವು ನೇಮಕಗೊಳಿಸಿದ್ದ ಏಕಸದಸ್ಯ ಆಯೋಗವು ಬುಧವಾರ ತನ್ನ ವರದಿಯನ್ನು ಸಲ್ಲಿಸಿದ್ದು,ಅದು ವಿವಿಯ ಕುಲಪತಿ ಅಪ್ಪಾ ರಾವ್ ಅವರನ್ನು ಎಲ್ಲ ಆರೋಪಗಳಿಂದ ಮುಕ್ತಗೊಳಿಸಿದೆ ಮತ್ತು ರೋಹಿತ್ ದಲಿತನಾಗಿರಲಿಲ್ಲ ಎಂದು ಹೇಳಿದೆ ಎಂದು ವರದಿಗಳು ತಿಳಿಸಿವೆ.

ರೋಹಿತ್ ದಲಿತನಾಗಿರಲಿಲ್ಲ ಎಂಬ ಆಯೋಗದ ತೀರ್ಮಾನವು ಅವರು ಆಂಧ್ರಪ್ರದೇಶದ ಮಾಲಾ ಪರಿಶಿಷ್ಟ ಜಾತಿಗೆ ಸೇರಿದ್ದ ಎಂದು ಘೋಷಿಸಿದ್ದ ಗುಂಟೂರು ಜಿಲ್ಲಾಧಿಕಾರಿಗಳ ಮತ್ತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ(ಎನ್‌ಸಿಎಸ್‌ಸಿ)ದ ವರದಿಗಳಿಗೆ ವ್ಯತಿರಿಕ್ತವಾಗಿರುವುದು ಹಲವರನ್ನು ಅಚ್ಚರಿಗೊಳಿಸಿದೆ. ವಿವಿ ಕ್ಯಾಂಪಸ್‌ನಲ್ಲಿ ನಿರಂತರ ತಾರತಮ್ಯದಿಂದಾಗಿ ಬೇಸತ್ತ ರೋಹಿತ್ ಕಳೆದ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವು ಜಾತಿ ಆಧಾರಿತ ತಾರತಮ್ಯದ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಹುಟ್ಟುಹಾಕಿತ್ತು.
ಇಲ್ಲಿಯ ಜೆಎನ್‌ಯು ವಿವಿಯ ಕ್ಯಾಂಪಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಿಕಾ, ರಾಷ್ಟ್ರವ್ಯಾಪಿ ಆಂದೋಲನ ನಡೆದಿದ್ದರೂ ತನ್ನ ಮಗನಿಗೆ ನ್ಯಾಯವೊದಗಿಸಲು ಸರಕಾರವು ಯಾವುದೇ ಕ್ರಮಗಳನ್ನು ಕೈಗೊಳ್ಳದ ಬಗ್ಗೆ ನೋವನ್ನು ವ್ಯಕ್ತಪಡಿಸಿದರು.


ತನ್ನ ಮಗನ ಹಂತಕರು ಮೇಲ್ಜಾತಿಗಳಿಗೆ ಸೇರಿದವರಾಗಿದ್ದಾರೆ. ಆತ ದಲಿತನಲ್ಲವೆಂದು ಸಾಬೀತಾದರೆ ತಾವು ದಲಿತ ದೌರ್ಜನ್ಯ ಕಾನೂನಿನ ಹಿಡಿತದಿಂದ ಪಾರಾಗುತ್ತೇವೆ ಎಂದು ಅವರು ಭಾವಿಸಿದ್ದಾರೆ. ಆತ ಒಬಿಸಿ ವರ್ಗಕ್ಕೆ ಸೇರಿದ್ದ ಎನ್ನುವುದು ರುಜುವಾತಾದರೆ ರೋಹಿತ್ ಆಂದೋಲನವನ್ನು ಬೆಂಬಲಿಸಿದ್ದ ದಲಿತರು ದೂರ ಸರಿಯುತ್ತಾರೆ ಎಂದು ಅವರು ಲೆಕ್ಕ ಹಾಕಿದ್ದಾರೆ. ಆದರೆ ರೋಹಿತ್‌ನನ್ನು ಹೊತ್ತು ಹೆತ್ತು ಬೆಳೆಸಿದ್ದು ತಾನು. ತಾನು ದಲಿತಳಾಗಿದ್ದೇನೆ, ತನ್ನ ಮಕ್ಕಳು ದಲಿತ ಬದುಕನ್ನು ಬಾಳಿದ್ದಾರೆ ಮತ್ತು ತಾನು ದಲಿತಳಾಗಿಯೇ ಸಾಯುತ್ತೇನೆ. ಮಕ್ಕಳು ಒಬಿಸಿ ವರ್ಗಕ್ಕೆ ಸೇರಿದ ತಮ್ಮ ತಂದೆಯಲ್ಲಿಗೆ ಹೋಗುತ್ತಿದ್ದರು.ಆದರೆ ಆ ಮನುಷ್ಯ ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಅವರಿಗೆಂದೂ ನೆರವಾಗಿರಲಿಲ್ಲ ಎಂದು ಅವರು ಹೇಳಿದರು.
 ರೋಹಿತ್ ಒಬಿಸಿಗೆ ಸೇರಿದವನು ಎಂದು ಬಿಂಬಿಸಿಬಿಟ್ಟರೆ ಆಂದೋಲನವು ಸತ್ತು ಹೋಗುತ್ತದೆಂದು ಸಂಚುಕೋರರು ಭಾವಿಸುತ್ತಿದ್ದಾರೆಯೇ? ಹೋರಾಟವನ್ನು ಬೆಂಬಲಿಸಲು ಒಬಿಸಿ ವರ್ಗದವರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರುತ್ತಾರೆ ಎಂದು ಅವರು ಹೇಳಿದರು. ನರೇಂದ್ರ ಮೋದಿ ಸರಕಾರದಲ್ಲಿ ತನಗೆ ವಿಶ್ವಾಸವಿಲ್ಲ. ಮೋದಿ ಏನಾದರೂ ಮಾಡಿಯಾರು ಎಂದು ತಾನು ಭಾವಿಸಿಲ್ಲ. ಈ ದೇಶದಲ್ಲಿ ದಲಿತರಿಗಿಂತ ಗೋವುಗಳಿಗೆ ಹೆಚ್ಚಿನ ಗೌರವ ದೊರೆಯುತ್ತದೆ. ಆದರೆ ದಲಿತರ ಬಳಿ ಮತಗಳಿವೆ ಮತ್ತು ಅದನ್ನು ಮುಂದಿನ ಚುನಾವಣೆಯಲ್ಲಿ ತೋರಿಸುತ್ತೇವೆ. ದಲಿತರು, ಬಹುಜನರು ಭವಿಷ್ಯವನ್ನು ನಿರ್ಧರಿಸುತ್ತಾರೆ. ಈ ದೇಶವು ಎಲ್ಲರಿಗಾಗಿ ಇದೆ. ಕೇವಲ ಮೇಲ್ಜಾತಿಗಳಿಗಲ್ಲ ಎಂದರು.
ಈ ಸರಕಾರದ ಅವಧಿಯಲ್ಲಿ ತನಗೆ ನ್ಯಾಯ ದೊರಕದಿರ ಬಹುದು. ಆದರೆ ಸುದೀರ್ಘ ಹೋರಾಟದ ಬಳಿಕ ಅದು ಸಿಕ್ಕೇ ಸಿಕ್ಕಲಿದೆ ಎಂದು ತನ್ನ ಒಳಮನಸು ಹೇಳುತ್ತಿದೆ. ಇಂತಹ ಸಾಂಸ್ಥಿಕ ಕೊಲೆಗಳು ಇನ್ನಷ್ಟು ನಡೆಯಬಾರದು ಎಂದೇ ತಾನು ಹೋರಾಟವನ್ನು ಆರಂಭಿಸಿದ್ದೇನೆ. ಇದು ಅಂತ್ಯಗೊಳ್ಳಲೇಬೇಕು.ತನ್ನ ಪಾಡನ್ನು ಯಾವ ತಾಯಿಯೂ ಅನುಭವಿಸಬಾರದು ಎಂದು ರಾಧಿಕಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X