ಕೋಡಿ: ಬ್ಯಾರೀಸ್ ಪ್ರಥಮದರ್ಜೆ ಕಾಲೇಜಿನಲ್ಲಿ 'ಕಡಲಸಿರಿ' ಸಾಂಸ್ಕೃತಿಕ ಸಂಘ ಉದ್ಘಾಟನೆ

ಕುಂದಾಪುರ, ಆ.26: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಕಡಲಸಿರಿ’ ಸಾಂಸ್ಕೃತಿಕ ಸಂಘ ಉದ್ಘಾಟಿಸಲ್ಪಟ್ಟಿತು.
ಸರಕಾರಿ ಪದವಿಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಯಕ್ಷಾ ಚಿತ್ರಪಟವನ್ನು ಅನಾವರಣಗೊಳಿಸುವ ಮೂಲಕ ಸಂಘವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿಯ ಕೀಳರಿಮೆಯನ್ನು ದೂರಗೊಳಿಸಿ ಅವರ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಈ ಸಾಂಸ್ಕೃತಿಕ ಸಂಘ ಸೂಕ್ತವಾದ ವೇದಿಕೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ.ಮಾಸ್ಟರ್ ಮೆಹಮೂದ್ ವಹಿಸಿದ್ದರು. ಸಾಂಸ್ಕೃತಿಕ ಸಂಘದ ಸಂಘಟಕರಾದ ಸಂದೀಪ ಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶಮೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಂಘ ಕಾರ್ಯದರ್ಶಿ ಸುಚಿತ್ರಾ ಅತಿಥಿಗಳನ್ನು ಪರಿಚಯಿಸಿದರು. ಅರ್ಪಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ದಾಕ್ಷಾಯಿಣಿ ಸ್ವಾಗತಿಸಿ, ವಿದ್ಯಾರ್ಥಿ ಪವನ್ ಕುಮಾರ್ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಾರದಾ ಹೊಳ್ಳರ ಮಧುರ ಗಾಯನ ಹಾಗೂ ಸಾಂಸ್ಕೃತಿಕ ಸಂಘದ ನೃತ್ಯ ವಿದ್ಯಾರ್ಥಿ ಸಮೂಹವನ್ನು ರಂಜಿಸಿತು.





