ಉದುಮ: ಯುವಕಾಂಗ್ರೆಸ್ ಕಾರ್ಯಕರ್ತನ ಕೊಲೆಗೆ ಯತ್ನ

ಕಾಸರಗೋಡು, ಆ.26: ತಂಡವೊಂದು ಯುವ ಕಾಂಗ್ರೆಸ್ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ಶುಕ್ರವಾರ ಉದುಮದಲ್ಲಿ ನಡೆದಿದೆ.
ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಾಂಗಾಡ್ ಆರ್ಯಡ್ಕದ ಶ್ಯಾಮ್ (26) ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 8:20ರ ಸುಮಾರಿಗೆ ಉದುಮ ಪೇಟೆಯಲ್ಲಿ ಘಟನೆ ನಡೆದಿದೆ. ಶ್ಯಾಮ್ ಅಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ಗಳಲ್ಲಿ ಬಂದ ಆರು ಮಂದಿಯ ತಂಡವು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ ಎನ್ನಲಾಗಿದೆ.
ಬೇಕಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಶ್ಯಾಮ್ ಈ ಹಿಂದೆ ನಡೆದ ಸಿಪಿಎಂ ಕಾರ್ಯಕರ್ತ ಬಾಲಕೃಷ್ಣನ್ ಕೊಲೆ ಪ್ರಕರಣದ ಎರಡನೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
Next Story





