ಕಾರು ಢಿಕ್ಕಿ: ಪಾದಚಾರಿಗೆ ಗಾಯ
ಉಪ್ಪಿನಂಗಡಿ, ಆ.26: ಕಾರು ಢಿಕ್ಕಿಯಾಗಿ ಪಾದಚಾರಿಯೋರ್ವರು ಗಂಭೀರ ಗಾಯಗೊಂಡ ಘಟನೆ ಗುರುವಾರ ನೆಲ್ಯಾಡಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಆರೀಫುಲ್ಲಾ(32) ಗಾಯಗೊಂಡವರು. ಇವರು ನೆಲ್ಯಾಡಿ ಪೇಟೆಯಲ್ಲಿ ನಡೆದುಕೊಂಡುಹೋಗುತ್ತಿದ್ದ ಸಂದಭರ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಅಲ್ಟೊ ಕಾರು ಢಿಕ್ಕಿ ಹೊಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಆರೀಫುಲ್ಲಾರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಕೃಷ್ಣಪ್ರಸಾದ್ ಎಂಬಾತನ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





