ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಬೈಂದೂರು, ಆ.26: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬೈಂದೂರು ವಿದ್ಯಾನಗರ ನಿವಾಸಿ ರಾಮ ಪೂಜಾರಿ ಎಂಬವರ ಮಗಳು ಸುಜಾತಾ(22) ಗುರುವಾರ ಬೆಳಗ್ಗೆ ತಲೆಸುತ್ತು ಬರುತ್ತಿದೆ ಎಂದು ಹೇಳಿ ಕೆಲಸದಿಂದ ಮನೆಗೆ ಬಂದವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯಡ್ಕ: ಉದ್ಯೋಗದಲ್ಲಿ ಉಂಟಾದ ಆರ್ಥಿಕ ನಷ್ಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ 76ನೆ ಬಡಗುಬೆಟ್ಟು ಗ್ರಾಮದ ಬೈಲೂರು ನಿವಾಸಿ ನಾಗರಾಜ ಆಚಾರ್ಯ(34) ಎಂಬವರು ಆ.22ರಿಂದ ಆ.26ರ ಮಧ್ಯಾವಧಿಯಲ್ಲಿ ಪುತ್ತಿಗೆ ಬಳಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





