ಪುಲ್ವಾನದಲ್ಲಿ ಉಗ್ರರ ಗುಂಡಿಗೆ ಓರ್ವ ಪೊಲೀಸ್ ಕಾನ್‌ಸ್ಟೇಬಲ್ ಬಲಿ

ಶ್ರೀನಗರ, ಆ.27: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉಗ್ರರು ಇಂದು ಬೆಳಗ್ಗೆ ಹತ್ಯೆ ಮಾಡಿದ್ದಾರೆ.
ಇರ್ಶಾದ್ ಅಹ್ಮದ್ ಗನೈ ಎಂಬವರು ಮನೆಯಿಂದ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅವರ ಮೇಲೆ ಉಗ್ರರು ದಾಳಿ ನಡೆಸಿ ಗುಂಡಿಟ್ಟು ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ಹಿಂದೆಯಷ್ಟೇ ಉಗ್ರರು ಪೊಲೀಸರ ಮೇಲೆ ಗ್ರೇನೆಡ್ ದಾಳಿ ನಡೆಸಿದ ಪರಿಣಾಮವಾಗಿ 9 ಮಂದಿ ಪೊಲೀಸರು ಗಾಯಗೊಂಡಿದ್ದರು. ಇದೀಗ ಮತ್ತೆ ಪೊಲೀಸರ ಮೇಲೆ ಉಗ್ರರ ದಾಳಿ ನಡೆದಿದೆ.
Next Story





