ಸಾಲಿಗ್ರಾಮದಲ್ಲಿ ಪ್ಲಾಸ್ಟಿಕ್ ವಶ
ಉಡುಪಿ, ಆ.27: ಪ್ಲಾಸ್ಟಿಕ್ ನಿಷೇಧದ ಹಿನ್ನೆಲೆಯಲ್ಲಿ ಸಾಲಿಗ್ರಾಮ ಮುಖ್ಯಾಧಿಕಾರಿ ಹಾಗೂ ಆರೋಗ್ಯ ನಿರೀಕ್ಷಕರು ಸಿಬ್ಬಂದಿಯಸಹಯೋಗದೊಂದಿಗೆ ಪೇಟೆಯಲ್ಲಿರುವ ಅಂಗಡಿ ಮತ್ತು ಮಳಿಗೆಗಳಿಗೆ ದಿಢೀರ್ ದಾಳಿ ನಡೆಸಿ, ಪ್ಲಾಸ್ಟಿಕ್ ನಿಷೇಧವಿದ್ದರೂ ಪ್ಲಾಸ್ಟಿಕ್ ಕವರ್‌ಗಳನ್ನು ಗ್ರಾಹಕರಿಗೆ ವಿತರಿಸುತ್ತಿರುವ ಅಂಗಡಿ ಮಾಲಕರ ಬಳಿ ಇದ್ದ ಪ್ಲಾಸ್ಟಿಕ್ ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದಾರೆ.
ಬಸ್ ನಿಲ್ದಾಣದ ಆಸುಪಾಸು ಹಾಗೂ ಪೇಟೆಯಲ್ಲಿರುವ ಅಂಗಡಿಗಳಿಗೆ ದಾಳಿ ನಡೆಸಿ ಪರಿಶೀಲನೆ ಮಾಡಿ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಲಿಗ್ರಾಮ ಪಪಂ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಘೋಷಿಸಲು ಎನ್‌ಜಿಓ ಸಂಟನೆಯ ಮೂಲಕ ಹಾಗೂ ಸ್ವಸಹಾಯ ಗುಂಪುಗಳ ನೆರವು ಪಡೆದು ಕ್ರಮ ವಹಿಸಲಾಗುವುದು ಎಂದು ಪ್ರಕಟನೆೆ ತಿಳಿಸಿದೆ.
Next Story





