ಕಲ್ಲಡ್ಕ: ಜಾನುವಾರು ಸಾಗಾಟದ ಲಾರಿ ಪಲ್ಟಿ; 3 ಜಾನುವಾರು ಸಾವು
.gif)
ಬಂಟ್ವಾಳ, ಆ.28: ಜಾನುವಾರು ಸಾಗಾಟದ ಲಾರಿಯೊಂದು ಉರುಳಿಬಿದ್ದ ಪರಿಣಾಮ ಮೂರು ಜಾನುವಾರುಗಳು ಹಸುನೀಗಿದ ಘಟನೆ ಕಲ್ಲಡ್ಕ ಸಮೀಪದ ಅಮ್ಟೂರು ಚರ್ಚ್ ಬಳಿ ಇಂದು ಮುಂಜಾನೆ ನಡೆದಿದೆ.
ಲಾರಿಯಲ್ಲಿದ್ದ ಒಟ್ಟು 11 ದನಗಳ ಪೈಕಿ 3 ಹಸುನೀಗಿತ್ತು. ಈ ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಬಂಟ್ವಾಳ ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ. ಲಾರಿಯು ಅಮ್ಟೂರು ಚರ್ಚ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಲಾರಿ ಚಾಲಕ ಸೇರಿದಂತೆ ಅದರಲ್ಲಿದ್ದವರು ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





