Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದ್ರುದ್ದೀನ್‌ರ ವ್ಯಕ್ತಿತ್ವ ಗುರುತಿಸುವ...

ಬದ್ರುದ್ದೀನ್‌ರ ವ್ಯಕ್ತಿತ್ವ ಗುರುತಿಸುವ ಕೆಲಸವಾಗಲಿ: ಪಿ.ವಿ.ಮೋಹನ್

ವಾರ್ತಾಭಾರತಿವಾರ್ತಾಭಾರತಿ28 Aug 2016 8:47 PM IST
share
ಬದ್ರುದ್ದೀನ್‌ರ ವ್ಯಕ್ತಿತ್ವ ಗುರುತಿಸುವ ಕೆಲಸವಾಗಲಿ: ಪಿ.ವಿ.ಮೋಹನ್

ಮಂಗಳೂರು, ಆ. 28: ಕಾರ್ಯಕರ್ತರ ಪರಿಶ್ರಮದ ಫಲವಾಗಿ ಕಾಂಗ್ರೆಸ್‌ನಲ್ಲಿ ಉನ್ನತ ಸ್ಥಾನ ಅಲಂಕರಿಸಿದವರಿಂದಲೇ ಕಾರ್ಯಕರ್ತರಿಗೆ ಆಗುತ್ತಿರುವ ಅವಗಣನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಎಐಸಿಸಿ ಸದಸ್ಯ ಪಿ.ವಿ.ಮೋಹನ್, ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಮುಹಮ್ಮದ್ ಬದ್ರುದ್ದೀನ್‌ನಂತಹ ಕಾರ್ಯಕರ್ತರು ಇಂದೂ ಪಕ್ಷದಲ್ಲಿದ್ದು, ಅವರನ್ನು ಗುರುತಿಸುವ ಕೆಲಸವಾಗಬೇಕಾಗಿದೆ ಎಂದು ಹೇಳಿದ್ದಾರೆ.

ಅವರು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಲ್ಮಠದ ಶಾಂತಿನಿಲಯದಲ್ಲಿ ಇಂದು ಸಂಜೆ ಹಮ್ಮಿಕೊಂಡ ‘ಮುಹಮ್ಮದ್ ಬದ್ರುದ್ದೀನ್ ನೆನಪು’ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಸುಮಾರು 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ್ದ ಮುಹಮ್ಮದ್ ಬದ್ರುದ್ದೀನ್‌ರವರ ಪ್ರಾಮಾಣಿಕ ಸೇವೆಗೆ ನಾವೇನು ಕೊಡುಗೆ ನೀಡಿದ್ದೇವೆ. ಬದ್ರುದ್ದೀನ್ ಎಲ್ಲರೊಂದಿಗೂ ಆತ್ಮೀಯತೆ ಬೆಳೆಸಿಕೊಂಡು, ಕೆಲಸ ಕಾರ್ಯಗಳಿಗೆ ಸ್ಪಂದಿಸುತ್ತಿದ್ದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರಲ್ಲಿ ನಾಯಕತ್ವ ಗುಣವಿತ್ತು. ಅದನ್ನು ನಾವು ಗುರುತಿಸದಿರುವುದು ಬೇಸರ ತಂದಿದೆ ಎಂದರು.

ತನ್ನ ಆತ್ಮೀಯ ಸ್ನೇಹಿತ ಬದ್ರುದ್ದೀನ್‌ನಂತಹ ಪ್ರಾಮಾಣಿಕ ಕಾರ್ಯಕರ್ತರು ಇಂದು ಕೂಡ ರಾಜ್ಯ, ಜಿಲ್ಲೆಗಳಲ್ಲಿದ್ದು, ಅಂತಹವರನ್ನು ಗುರುತಿಸುವ ಕೆಲಸ ವಾಗಬೇಕು. ಕಾರ್ಯಕರ್ತರ ಪ್ರಾಮಾಣಿಕ ಸೇವೆಯಿಂದ ಉನ್ನತ ಹುದ್ದೆಗೆ ಏರಿರುವ ಇಂದಿನ ರಾಜಕಾರಣಿಗಳು ಕಾರ್ಯಕರ್ತರನ್ನೇ ಮರೆಯುತ್ತಿರುವುದು ಸರಿಯಲ್ಲ. ಕಾರ್ಯಕರ್ತರನ್ನು ಕೇವಲ ತಮಗೆ ಬೇಕಾದಂತೆ ಬಳಕೆ ಮಾಡಿ ಅನಂತರ ಅವರನ್ನು ಮರೆತುಬಿಡುವ ರಾಜಕಾರಣಿಗಳು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಮೋಹನ್ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಮುಹಮ್ಮದ್ ಬದ್ರುದ್ದೀನ್ ವಿದ್ಯಾರ್ಥಿ ಕಾಂಗ್ರೆಸ್ ಸಂಘಟನೆಯಿಂದ ಮೇಲೆ ಬಂದವರು. ಅದರಿಂದಲೇ ಅವರಿಗೆ ಗೌರವ ಬಂದಿದೆ. ಬದ್ರುದ್ದೀನ್ ಅವರು ಕಾಂಗ್ರೆಸ್ ಪಕ್ಷ ತನಗೆ ನೀಡಿದ್ದ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕ ಸೇವೆ ಸಲ್ಲಿಸಿದವರು. ಪಕ್ಷದ ಕ್ರಿಯಾಶೀಲ ಮತ್ತು ನಿಷ್ಠಾವಂತ ಕಾರ್ಯಕರ್ತ. ಇವರ ಸೇವೆ ಪಕ್ಷಕ್ಕೆ ಇನ್ನೂ ಅಗತ್ಯವಿತ್ತು ಎಂದರು.

ನುಡಿನಮನ ಸಲ್ಲಿಸಿದ ಕಳ್ಳಿಗೆ ತಾರನಾಥ ಶೆಟ್ಟಿ, ಅವರು ಮುಹಮ್ಮದ್ ಬದ್ರುದ್ದೀನ್ ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.

ಹೊಸದಿಲ್ಲಿ ನೆಹರೂ ಯುವ ಕೇಂದ್ರದ ನಿರ್ದೇಶಕ ಸಲೀಂ ಅಹ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಜೆ.ಆರ್.ಲೋಬೊ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಚಿವ ಖಾದರ್, ಶಾಸಕ ಮೊಯ್ದಿನ್ ಬಾವ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮುಡಾದ ಮಾಜಿ ಅಧ್ಯಕ್ಷ ಸುರೇಶ್ ಬಳ್ಳಾಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಕಾಂಗ್ರೆಸ್ ಮುಖಂಡರಾದ ವಿಶ್ವಾಸ್ ಕುಮಾರ್ ದಾಸ್, ತೇಜಸ್ವಿರಾಜ್, ಶಶಿಧರ್ ಹೆಗ್ಡೆ, ಮುಹಮ್ಮದ್ ಮೋನು, ಅಬೂಬಕರ್ ಬಜಾಲ್, ಶಂಶುದ್ದೀನ್ ಕುದ್ರೋಳಿ, ಬಾಲಕೃಷ್ಣ ಶೆಟ್ಟಿ, ಶಶಿಕಲಾ ಕದ್ರಿ, ಈಶ್ವರ್ ಉಳ್ಳಾಲ್, ಸೇವಾದಳದ ಅಧ್ಯಕ್ಷ ಅಶ್ರಫ್, ಬದ್ರುದ್ದೀನ್ ಅವರ ಪತ್ನಿ, ಪುತ್ರಿ, ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 10 ಮಂದಿ ಕಾರ್ಯಕರ್ತರಿಗೆ ‘ಮುಹಮ್ಮದ್ ಬದ್ರುದ್ದೀನ್ ಸೇವಕ್ ಸಾಧನಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಮೂವರಿಗೆ ‘ಮುಹಮ್ಮದ್ ಬದ್ರುದ್ದೀನ್ ಮರಣೋತ್ತರ ಪ್ರಮುಖ್ ಗೌರವ ಪುರಸ್ಕಾರ’ ನೀಡಲಾಯಿತು. ಹಾಗೂ 10 ಮಂದಿಗೆ ಬದ್ರುದ್ದೀನ್ ಆರೋಗ್ಯ ನೆರವು ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X