Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಛಾಯಾಗ್ರಾಹಕರಿಗೆ ಶೀಘ್ರ ಆಶ್ರಯ ನಿವೇಶನ:...

ಛಾಯಾಗ್ರಾಹಕರಿಗೆ ಶೀಘ್ರ ಆಶ್ರಯ ನಿವೇಶನ: ಸಚಿವ ಮಲ್ಲಿಕಾರ್ಜುನ್

ವಿಶ್ವ ಛಾಯಾಗ್ರಹಣ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ28 Aug 2016 10:26 PM IST
share
ಛಾಯಾಗ್ರಾಹಕರಿಗೆ ಶೀಘ್ರ ಆಶ್ರಯ ನಿವೇಶನ: ಸಚಿವ ಮಲ್ಲಿಕಾರ್ಜುನ್

ದಾವಣಗೆರೆ, ಆ. 28: ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ವಸತಿ ಯೋಜನೆ ಕಲ್ಪಿಸುವ ಉದ್ದೇಶದಿಂದ ಸೂಕ್ತ ಜಮೀನಿಗಾಗಿ ಹುಡುಕಾಟ ನಡೆಸುತ್ತಿದ್ದು, ನಿರೀಕ್ಷಿತ ಜಮೀನು ದೊರೆತ ಕೂಡಲೇ ಎಲ್ಲರಿಗೂ ಆಶ್ರಯ ನಿವೇಶನಗಳನ್ನು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದ್ದಾರೆ.

ನಗರದ ರೇಣುಕಾಮಂದಿರದಲ್ಲಿ ರವಿವಾರ ಜಿಲ್ಲಾ ಫೋಟೊಗ್ರಾಫರ್ಸ್‌, ವೀಡಿಯೊಗ್ರಾಫರ್ಸ್‌ ಹಾಗೂ ತಾಲೂಕು ಫೋಟೊಗ್ರಾಫರ್ಸ್‌ ಯೂತ್ ವೆಲ್‌ಫೇರ್ ಅಸೋಸಿಯೇಶನ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಶ್ರಯ ಮನೆಗಳನ್ನು ನೀಡುವ ಕಾರ್ಯವನ್ನು 2002ರಿಂದಲೇ ನಿಲ್ಲಿಸಲಾಗಿದೆ. ಅಂದಿನಿಂದ ಇಂದಿನವರೆಗೆ ಜನಸಂಖ್ಯೆ ಹೆಚ್ಚಿದ್ದು, ಭೂಮಿಯ ಬೆಲೆಯೂ ದುಪ್ಪಟ್ಟಾಗಿದೆ. ಹಾಗಾಗಿ, ಭೂಮಿ ಖರೀದಿಯಲ್ಲಿ ವಿಳಂಬವಾಗುತ್ತಿದೆ ಎಂದರು.

 ಈಗಾಗಲೇ ಛಾಯಾಗ್ರಾಹಕರ ಕುಟುಂಬದ ಮಕ್ಕಳಿಗೆ ವಿಶೇಷ ಕೆಟಗರಿ ಅಡಿ ಸ್ಕಾಲರ್‌ಶಿಪ್ ನೀಡಲಾಗುತ್ತಿದೆ. ಛಾಯಾಗ್ರಾಹಕರಿಗೂ ಶೀಘ್ರವೇ ಉಚಿತ ನಿವೇಶನ ಕೊಡಿಸಲಾಗುವುದು ಎಂದು ಅವರು ತಿಳಿಸಿದರು.

ಇಂದಿನ ತಂತ್ರಜ್ಞಾನದ ಯುಗದಲ್ಲಿ ಛಾಯಾಗ್ರಾಹಕರು ಲಕ್ಷಾಂತರ ರೂ. ವ್ಯಯಿಸಿ ಕ್ಯಾಮರಾ ಖರೀದಿ ಮಾಡಿರುತ್ತಾರೆ. ಆದರೆ, ಅದಕ್ಕೆ ತಕ್ಕನಾದ ದುಡಿಮೆ ಆಗುತ್ತಿಲ್ಲ. ಅನೇಕ ವರ್ಷಗಳಿಂದ ಛಾಯಾಗ್ರಾಹಕರ ಆಗುಹೋಗುಗಳನ್ನು ಅರಿತಿದ್ದೇನೆ. ಆದ್ದರಿಂದ ಮುಂದಿನ ದಿನಗಳಲ್ಲಿ ಛಾಯಾಗ್ರಾಹಕರಿಗೆ ಎಲ್ಲಾ ರೀತಿಯ ನೆರವು ನೀಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿದರು.ಫೆಟೊಗ್ರಾಫರ್ಸ್‌ ಅಸೋಸಿಯೇಶನ್‌ನ ಜಿಲ್ಲಾ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಒಂದು ಇಡೀ ಪುಸ್ತಕ ಓದಿ ತಿಳಿದುಕೊಳ್ಳಬೇಕಾದ್ದನ್ನು ಛಾಯಾಗ್ರಾಹಕ ಒಂದು ಚಿತ್ರದಲ್ಲಿ ಅದರ ಸಮಗ್ರ ವರದಿ ನೀಡಬಲ್ಲ. ಇರುವುದನ್ನು ಇರುವಂತೆ ಸತ್ಯ ಹೇಳುವ ಕಲೆಯೆಂದರೆ ಅದು ಛಾಯಾಚಿತ್ರವೊಂದೆ ಎಂದ ಅವರು, ಎಲ್ಲರ ನೆನಪುಗಳನ್ನು ಹಸಿರಾಗಿಡುವಂತೆ ಕೆಲಸ ಮಾಡುವ ಛಾಯಾಗ್ರಾಹಕರ ಬದುಕು ಹಸನಾಗಲಿ ಎಂದು ಹಾರೈಸಿದರು.

ಅಸೋಸಿಯೇಷನ್‌ನ ಜಿಲ್ಲಾ ಕಾರ್ಯದರ್ಶಿ ವಿಜಯ್ ಜಾಧವ್ ಪ್ರಾಸ್ತಾವಿಕ ಮಾತನಾಡಿದರು. ಇದೇ ವೇಳೆ ಹಿರಿಯ ಛಾಯಾಗ್ರಾಹಕ ಬಾಬಣ್ಣ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಜಿಲ್ಲಾ ಫೋಟೊಗ್ರಾಫರ್ಸ್‌ ಮತ್ತು ವೀಡಿಯೊಗ್ರಾಫರ್ಸ್‌ ಸಂಘದ ಜಿಲ್ಲಾಧ್ಯಕ್ಷ ಶಿಕಾರಿ ಶಂಭು, ವರ್ತಕ ದೇವರಮನೆ ಶಿವಕುಮಾರ್, ವಿವಿಧೋದ್ದೇಶ ಸಂಘದ ಜಿಲ್ಲಾಧ್ಯಕ್ಷ ಆರ್.ಎನ್. ಪಾಟೀಲ್, ದೇವರಾಜ್, ಅಂಬಾಸ್, ಶಿವಣ್ಣ, ಸತೀಶ್ ಪವಾರ್, ಶಿವಲಿಂಗಪ್ಪ, ರಾಮಚಂದ್ರ, ತಿಪ್ಪೇಸ್ವಾಮಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X