ಮಣಿಪಾಲ: ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜು ಉಪಪ್ರಾಂಶುಪಾಲರಿಂದ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ
ಕ್ರಮಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ

ಮಣಿಪಾಲ, ಆ.29: ಇಲ್ಲಿನ ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕಿಯೋರ್ವರಿಗೆ ಕಾಲೇಜಿನ ಉಪಪ್ರಾಂಶುಪಾಲ ಕಿರುಕುಳ ನೀಡಿದ್ದು, ಉಪಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಉಪಪ್ರಾಂಶುಪಾಲ ಶ್ರೀಕಾಂತ್ ಪೈ ಎಂಬವರು ಆ.27ರಂದು ಕಾಲೇಜಿನ ಸ್ಟಾಫ್ ಚೇಂಬರ್‌ನಲ್ಲಿ ಉಪನ್ಯಾಸಕಿಗೆ ಕಿರುಕುಳ ನೀಡಿದ್ದಾರೆ ಎಂದು ಮಣಿಪಾಲ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಇದೆ.
ತಪ್ಪಿತಸ್ಥ ಉಪಪ್ರಾಂಶುಪಾಲರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಕಾಲೇಜಿವ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಸ್ಥಳಕ್ಕಾಗಮಿಸಿದ ಕಾಲೇಜಿನ ಕೋ-ಆರ್ಡಿನೇಟರ್ ರಂಗ ಪೈ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿ, ಉಪಪ್ರಾಂಶುಪಾಲರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದರು. ಆದರೆ, ಇದಕ್ಕೊಪ್ಪದ ವಿದ್ಯಾರ್ಥಿಗಳು ಅಮಾನತು ಆದೇಶ ಪತ್ರವನ್ನು ತಂದು ತೋರಿಸುವಂತೆ ಪಟ್ಟು ಹಿಡಿದಿದ್ದು, ಕ್ಲಾಸಿಗೆ ತೆರಳಲು ನಿರಾಕರಿಸಿ ಧರಣಿ ಮುಂದುವರೆಸಿದ್ದಾರೆ.





