ಸಿಂಧು,ಸಾಕ್ಷಿ, ದೀಪಾ, ಜಿತುಗೆ ಖೇಲ್ ರತ್ನ ಪ್ರದಾನ

ಹೊಸದಿಲ್ಲಿ, ಆ.29: ದೇಶದ ನಾಲ್ವರು ಕ್ರೀಡಾಪಟುಗಳಿಗೆ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪುರಸ್ಕಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ‘ಖೇಲ್ ದಿವಸ್ ’ ·ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ ಪಿ.ವಿ.ಸಿಂಧು, ಕಂಚು ಜಯಿಸಿದ ಸಾಕ್ಷಿ ಮಲಿಕ್ , ಜಿಮ್ನಾಸ್ಟಿಕ್‌ನಲ್ಲಿ ನಾಲ್ಕನೆ ಸ್ಥಾನದೊಂದಿಗೆ ಇತಿಹಾಸ ಬರೆದಿರುವ ದೀಪಾ ಕರ್ಮಾಕರ್ ಮತ್ತು ಶೂಟರ್ ಜಿತು ರಾಯ್ ಅವರಿಗೆ ದೇಶದ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಾಲ್ಕು ವರ್ಷಗಳ ಅವಧಿಯಲ್ಲಿ ಇವರು ನೀಡಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ನಾಲ್ವರು ಕ್ರೀಡಾ ಸಾಧಕರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವ ನೀಡಲಾಗಿದೆ.
ಇದೇ ಸಂದರ್ಭದಲ್ಲಿ ಆ ಮಂದಿ ಕೋಚ್‌ಗಳಿಗೆ ದ್ರೋಣಾಚಾರ್ಯ ಪ್ರಶಸ್ತಿ 15 ಮಂದಿಗೆ ಕ್ರೀಡಾ ಸಾಧಕರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಯಿತು.
Next Story





