Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಯೋ ಒಲಿಂಪಿಕ್ಸ್ ಮುಗಿದರೂ ಮುಂದುವರಿದ...

ರಿಯೋ ಒಲಿಂಪಿಕ್ಸ್ ಮುಗಿದರೂ ಮುಂದುವರಿದ ಕ್ರೀಡಾ ಸಚಿವರ ಯಡವಟ್ಟುಗಳು

ವಾರ್ತಾಭಾರತಿವಾರ್ತಾಭಾರತಿ29 Aug 2016 11:08 PM IST
share

  ಹೊಸದಿಲ್ಲಿ,ಆ.29: ರಿಯೊ ಒಲಿಂಪಿಕ್ಸ್ ಅಂತ್ಯಗೊಂಡಿದ್ದರೂ ಕ್ರೀಡಾ ಸಚಿವ ವಿಜಯ ಗೋಯೆಲ್ ಅವರ ಯಡವಟ್ಟುಗಳು ಮುಂದುವರಿದಿವೆ. ಅಥ್ಲೀಟ್‌ಗಳ ಹೆಸರುಗಳ ತಪ್ಪು ಉಚ್ಚಾರಣೆ, ಹೆಸರುಗಳ ಕಲಬೆರಕೆ ಮತ್ತು ಬ್ರೆಝಿಲ್‌ನಲ್ಲಿ ಹೆಚ್ಚುಕಡಿಮೆ ಮಾನ್ಯತೆಯನ್ನೇ ಕಳೆದುಕೊಳ್ಳುವ ಮಟ್ಟದ ಅಧ್ವಾನದ ಬಳಿಕ ಇದೀಗ ಇನ್ನೊಂದು ಪ್ರಮಾದವೆಸಗಿದ್ದಾರೆ. ಬಳಿಕ ಇದೊಂದು ಬಾಯಿ ತಪ್ಪಿ ಬಂದ ಮಾತು ಎಂದು ಹೇಳಿ ತಿಪ್ಪೆ ಸಾರಿಸಿದ್ದಾರೆ.

ರಿಯೋ ‘ಚಿನ್ನದ ಪದಕಗಳ ’ ವಿಜೇತರಾದ ಪಿ.ವಿ.ಸಿಂಧು ಮತ್ತು ಸಾಕ್ಷಿ ಮಲಿಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಕುರಿತು ಗೋಯೆಲ್ ರವಿವಾರ ಇಲ್ಲಿ ಸುದ್ದಿಗಾರರಿಗೆ ವಿವರಗಳನ್ನು ನೀಡಿದ್ದರು. ಪ್ರಧಾನಿ ಮೋದಿಯವರು ಇಂದು ಖೇಲ್‌ರತ್ನ, ಧ್ಯಾನಚಂದ್ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ವಿಜೇತರನ್ನು ಭೇಟಿಯಾಗಿದ್ದರು. ಈ ಕ್ರೀಡಾಪಟುಗಳಲ್ಲಿ ಇಬ್ಬರು ರಿಯೋ ಚಿನ್ನದ ಪದಕ ವಿಜೇತರಾದ ಪಿ.ವಿ.ಸಿಂಧು ಮತ್ತು ಸಾಕ್ಷಿ ಮಲಿಕ್ ಅವರೂ ಸೇರಿದ್ದರು ಎಂದು ಗೋಯೆಲ್ ಮಾಧ್ಯಮಗಳ ಕ್ಯಾಮರಾದ ಮುಂದೆ ಹೇಳಿದ್ದರು. ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಬ್ಯಾಡಿಂಟನ್‌ನಲ್ಲಿ ಬೆಳ್ಳಿ ಮತ್ತು ಸಾಕ್ಷಿ ಕುಸ್ತಿಯಲ್ಲಿ ಕಂಚಿನ ಪದಕಗಳನ್ನು ಗೆದ್ದಿದ್ದರು.
ಸಚಿವರ ಈ ಅಧ್ವಾನದ ಹೇಳಿಕೆಯ ವೀಡಿಯೊ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹರಿದಾಡಿದೆ, ಸಾಲದ್ದಕ್ಕೆ ಇದೇ ಒಂದು ಜೋಕಿನ ವಿಷಯವಾಗಿದೆ ಮತ್ತು ಅವರ ಜ್ಞಾನ ಸಂಪತ್ತು ಮೂದಲಿಕೆಗೊಳಗಾಗಿದೆ.
ಬಾಯಿ ತಪ್ಪಿ ಹೇಳಿದ ಮಾತನ್ನೇ ಜನರು ದೊಡ್ಡದು ಮಾಡಬಾರದು, ಎಂದಾದರೊಮ್ಮೆ ಇಂತಹ ತಪ್ಪುಗಳಾಗುತ್ತವೆ. ನಾನು ಪದಕ ವಿಜೇತರು ಎಂದು ಹೇಳಲು ಬಯಸಿದ್ದೆ, ಆದರೆ ಚಿನ್ನದ ಪದಕ ವಿಜೇತರು ಎನ್ನುವುದು ಬಾಯಿಯಿಂದ ಹೊರಬಿದ್ದಿತ್ತು. ಅದೇನೇ ಇರಲಿ,ಮುಂಬರುವ ವರ್ಷಗಳಲ್ಲಿ ಚಿನ್ನದ ಪದಕಗಳು ನಮ್ಮದಾಗಹುದು ಎಂದು ಗೋಯೆಲ್ ಸಮಜಾಯಿಷಿ ನೀಡಿದ್ದಾರೆ.
ಗೋಯೆಲ್ ಹಿಂದೆ ಅಥ್ಲೀಟ್ ಸರ್ಬಾನಿ ನಂದಾ ಅವರಿಗೆ ಟ್ವಿಟರ್‌ನಲ್ಲಿ ಶುಭ ಕೋರುವಾಗ ಅವರ ಬದಲು ದ್ಯುತಿ ಚಂದ್ ಫೋಟೋ ಪೋಸ್ಟ್ ಮಾಡಿದ್ದರು. ಇದೇ ಟ್ವಿಟರ್‌ನಲ್ಲಿ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಅವರ ಹೆಸರನ್ನು ದೀಪಾ ಕರ್ಮಾಣಕರ್ ಎಂದು ತಪ್ಪಾಗಿ ಬರೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X