ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆ.29: ರಾಜ್ಯ ಸರಕಾರವು 10 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಶ್ರೀರೂಪಾ-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ, ಪ್ರಸನ್ನ ವಿ.-ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ, ಅರುಣಾಪ್ರಭಾ ಎಚ್.ಎಸ್.-ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ವೃಷಭೇಂದ್ರಮೂರ್ತಿ-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ(ಆಡಳಿತ), ಶಿಲ್ಪಾ ಎಂ-ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯ ಮುಖ್ಯ ಆಡಳಿತಾಧಿಕಾರಿ, ನವೀನ್‌ಕುಮಾರ್ ರಾಜು-ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯಕಾರ್ಯ ನಿರ್ವಹಣಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ನೂರ್ ಜಹಾನ್‌ಖಾನಂ-ವರ್ಗಾವಣೆ ಆದೇಶವನ್ನು ರದ್ದುಪಡಿಸಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧಿಕಾರಿಯನ್ನಾಗಿ ಮುಂದುವರಿಸಲಾಗಿದೆ. ಡಾ.ದಾಕ್ಷಾಯಿಣಿ ಕೆ.-ವರ್ಗಾವಣೆ ಆದೇಶವನ್ನು ಮಾರ್ಪಡಿಸಿ ಬಿಎಂಆರ್‌ಡಿಎ ಸಹಾಯಕ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.
ಕೃಷ್ಣಗೌಡ ತಾಯಣ್ಣವರ್‌ನ್ನು ಬೆಂಗಳೂರು ಜಲಮಂಡಳಿಯ ಆಡಳಿತಾಧಿಕಾರಿ ಹಾಗೂ ಕೃಷ್ಣಮೂರ್ತಿಯವರನ್ನು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.





