ಮಿತ್ತಬೈಲ್ನಲ್ಲಿ ಸರಣಿ ಅಪಘಾತ
![ಮಿತ್ತಬೈಲ್ನಲ್ಲಿ ಸರಣಿ ಅಪಘಾತ ಮಿತ್ತಬೈಲ್ನಲ್ಲಿ ಸರಣಿ ಅಪಘಾತ](https://www.varthabharati.in/sites/default/files/images/articles/2016/08/30/sarani-apaghatha-01-.gif)
ಬಂಟ್ವಾಳ, ಆ.30: ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಮಸೀದಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್, ಕಾರು, ಲಾರಿ ನಡುವೆ ಸರಣಿ ಅಪಘಾತ ಸಂವಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರಿನ ಹಿಂಭಾಗಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಸಂಪೂರ್ಣ ಜಖಂ ಗೊಂಡಿತ್ತು. ಈ ವೇಳೆ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕುಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ, ಎಸ್ಸೈ ಕುಟ್ಟಿ ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Next Story