ಗುಣಪಾಲ ಶೆಟ್ಟಿ ನಿಧನ

ಮುಲ್ಕಿ, ಆ.30: ತೋಕೂರು ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಮಾಜಿ ಮೊಕ್ತೇಸರ ಹೊಸ ಮನೆ ತೋಕೂರು ಗುತ್ತು ಗುಣಪಾಲ ಶೆಟ್ಟಿ (75 ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಮೂವರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
ಮೃತರು ಮುಲ್ಕಿ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್‌ನ ಮಾಜಿ ಉಪಾಧ್ಯಕ್ಷ, ಬೆಳ್ಳಾಯರು ಗ್ರಾಪಂನ ಮಾಜಿ ಅಧ್ಯಕ್ಷ, ಮಂಗಳೂರು ಭೂ ಅಭಿವೃದ್ಧಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ, ಹಳೆಯಂಗಡಿ ಪಿ.ಸಿ.ಎ. ಬ್ಯಾಂಕ್‌ನ ಮಾಜಿ ನಿರ್ದೇಶಕರಾಗಿದ್ದರು. ಅಲ್ಲದೆ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.
Next Story





