Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೊಹಿಂಗ್ಯ ಮುಸ್ಲಿಮರ ಬಗ್ಗೆ ಜಾಗತಿಕ...

ರೊಹಿಂಗ್ಯ ಮುಸ್ಲಿಮರ ಬಗ್ಗೆ ಜಾಗತಿಕ ಕಳವಳ: ಮ್ಯಾನ್ಮಾರ್‌ಗೆ ಎಚ್ಚರಿಸಿದ ಬಾನ್ ಕಿ ಮೂನ್

ವಾರ್ತಾಭಾರತಿವಾರ್ತಾಭಾರತಿ31 Aug 2016 7:51 PM IST
share
ರೊಹಿಂಗ್ಯ ಮುಸ್ಲಿಮರ ಬಗ್ಗೆ ಜಾಗತಿಕ ಕಳವಳ: ಮ್ಯಾನ್ಮಾರ್‌ಗೆ ಎಚ್ಚರಿಸಿದ ಬಾನ್ ಕಿ ಮೂನ್

 ನೇಪಿಟಾವ್ (ಮ್ಯಾನ್ಮಾರ್), ಆ. 31: ಬಹುಸಂಖ್ಯಾತ ಬೌದ್ಧರ ಹಿಂಸಾಚಾರಕ್ಕೆ ಗುರಿಯಾಗಿ ರಖೈನ್ ರಾಜ್ಯದ ಉತ್ತರ ಭಾಗದಲ್ಲಿರುವ ಶಿಬಿರಗಳಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸಿಸುತ್ತಿರುವ ಲಕ್ಷಾಂತರ ರೊಹಿಂಗ್ಯ ಮುಸ್ಲಿಮ್ ನಿರಾಶ್ರಿತರ ಬಗ್ಗೆ ಜಗತ್ತು ಭಾರೀ ಕಳವಳಗೊಂಡಿದೆ ಎಂದು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಬಾನ್ ಕಿ ಮೂನ್ ಮ್ಯಾನ್ಮಾರ್ ಸರಕಾರಕ್ಕೆ ಹೇಳಿದ್ದಾರೆ.


‘‘ಅವರಿಗೆ ಭರವಸೆ ಬೇಕು’’ ಎಂದು ಮ್ಯಾನ್ಮಾರ್ ನಾಯಕಿ ಆಂಗ್ ಸಾನ್ ಸೂ ಕಿ ಜೊತೆ ಇಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾನ್ ಹೇಳಿದರು.


‘‘ಮ್ಯಾನ್ಮಾರ್‌ನ ಎಲ್ಲ ಜನಾಂಗ ಮತ್ತು ಹಿನ್ನೆಲೆಗಳ ಜನರು ತಮ್ಮ ನೆರೆಯವರೊಂದಿಗೆ ಸಮಾನತೆ ಮತ್ತು ಸೌಹಾರ್ದತೆಯೊಂದಿಗೆ ಬಾಳಲು ಸಾಧ್ಯವಾಗಬೇಕು’’ ಎಂದರು.


 ದೇಶದ ಹಲವಾರು ಸಶಸ್ತ್ರ ಜನಾಂಗೀಯ ಅಲ್ಪಸಂಖ್ಯಾತ ಗುಂಪುಗಳು ಮತ್ತು ಸರಕಾರದ ನಡುವೆ ಅರ್ಧ ಶತಮಾನದಿಂದ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸುವ ಉದ್ದೇಶದ ಶಾಂತಿ ಮಾತುಕತೆಗಳಲ್ಲಿ ಭಾಗವಹಿಸುವುದಕ್ಕಾಗಿ ಬಾನ್ ಮ್ಯಾನ್ಮಾರ್‌ಗೆ ಭೇಟಿ ನೀಡಿದ್ದಾರೆ.
ಮಾತುಕತೆಗಳು ರಾಜಧಾನಿ ನೇಪಿಟಾವ್‌ನಲ್ಲಿ ಬುಧವಾರ ಆರಂಭಗೊಳ್ಳುತ್ತದೆ. ಉದ್ಘಾಟನಾ ಸಮಾರಂಭದಲ್ಲಿ ಸುಮಾರು 2,000 ಪ್ರತಿನಿಧಿಗಳು ಮತ್ತು ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ.


‘‘ಮಾತುಕತೆಯಲ್ಲಿ ಎಲ್ಲ ಗುಂಪುಗಳು ಭಾಗವಹಿಸುವಂತಾಗಲು ಸಾಧ್ಯವಿರುವ ಎಲ್ಲವನ್ನೂ ನಾವು ಮಾಡುತ್ತಿದ್ದೇವೆ. ಆದರೆ, ಭಾಗವಹಿಸುವುದು, ಬಿಡುವುದು ಅವರಿಗೆ ಬಿಟ್ಟದ್ದು’’ ಎಂದು ವಿದೇಶ ಸಚಿವೆಯೂ ಆಗಿರುವ ಸರಕಾರದ ಸಲಹಾಕಾರ್ತಿ ಸೂ ಕಿ ಹೇಳಿದರು.
ಸೂ ಕಿಯ ನಾಯಕತ್ವದಲ್ಲಿ ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳುವ ‘‘ಭಾರೀ ನಿರೀಕ್ಷೆ’’ಯನ್ನು ಜಗತ್ತು ಹೊಂದಿದೆ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥರು ನುಡಿದರು.


ದೇಶವು ಸೇನಾ ಸರ್ವಾಧಿಕಾರದಿಂದ ಪ್ರಜಾಪ್ರಭುತ್ವದ ತೆಕ್ಕೆಗೆ ಹೊರಳಿದ ಅಸಾಮಾನ್ಯ ನಡೆಯನ್ನು ಅವರು ಶ್ಲಾಘಿಸಿದರು. ಆದರೆ, ರೊಹಿಂಗ್ಯ ಮುಸ್ಲಿಮರ ಬವಣೆ ಸೇರಿದಂತೆ ಮ್ಯಾನ್ಮಾರ್ ಎದುರಿಸುತ್ತಿರುವ ಹಲವಾರು ಸವಾಲುಗಳ ಬಗ್ಗೆ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X