ಬೈಕ್ ಪಲ್ಟಿ: ಸವಾರ ಮೃತ್ಯು
ಶಿರ್ವ, ಆ.31: ಶಿರ್ವ ಮಸೀದಿ ಬಳಿ ಆ.30ರಂದು ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಕೊಡವೂರು ಗ್ರಾಮದ ಮೂಡುಬೆಟ್ಟು 3ನೆ ಕ್ರಾಸ್ ನಿವಾಸಿ ರಾಘವೇಂದ್ರ ಭಟ್ ಎಂದು ಗುರುತಿಸಲಾಗಿದೆ. ಬೈಕಿನ ಹಿಂಬದಿಯಲ್ಲಿದ್ದ ಅವರ ಪತ್ನಿ ಶಶಿಕಲಾ (55) ತೀವ್ರವಾಗಿ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಘವೇಂದ್ರ ಭಟ್ ಆ.30ರಂದು ಮಧ್ಯಾಹ್ನ ತನ್ನ ಪತ್ನಿಯೊಂದಿಗೆ ಬೆಳ್ಮಣ್ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಬೈಕ್‌ನಲ್ಲಿ ಮನೆಗೆ ಬರು ತ್ತಿದ್ದಾಗ ಶಿರ್ವ ಮಸೀದಿ ಬಳಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ರಾಘವೇಂದ್ರ ಭಟ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





