Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಾಜದಲ್ಲಿ ಒಡಕುಂಟುಮಾಡುವ ಶ್ರಮವನ್ನು...

ಸಮಾಜದಲ್ಲಿ ಒಡಕುಂಟುಮಾಡುವ ಶ್ರಮವನ್ನು ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು: ಪಿಣರಾಯಿ ವಿಜಯನ್

ವಾರ್ತಾಭಾರತಿವಾರ್ತಾಭಾರತಿ1 Sept 2016 12:28 PM IST
share
ಸಮಾಜದಲ್ಲಿ ಒಡಕುಂಟುಮಾಡುವ ಶ್ರಮವನ್ನು ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು: ಪಿಣರಾಯಿ ವಿಜಯನ್

ತಿರುವನಂತಪುರಂ,ಸೆ.1: ಸಮಾಜದಲ್ಲಿ ಒಡಕು ಸೃಷ್ಟಿಸುವವರನ್ನು ಮತ್ತು ಅಂತಹ ಪ್ರಯತ್ನಗಳನ್ನು ಎಲ್ಲರೂ ಸೇರಿ ಒಗ್ಗಟ್ಟಿನಿಂದ ಎದುರಿಸಬೇಕಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಳೆದ ನೂರುದಿವಸಗಳಲ್ಲಿ ಈನಿಟ್ಟಿನಲ್ಲಿ ಸರಕಾರಕ್ಕೆ ನೀಡಿದ ಬೆಂಬಲವನ್ನು ಮುಂದುವರಿಸಬೇಕೆಂದು ಅವರು ಜನರನ್ನು ವಿನಂತಿಸಿದ್ದಾರೆ. ಸಮಾಜಕಲ್ಯಾಣ- ಅಭಿವೃದ್ಧಿಗಳನ್ನು ಜೊತೆಯಾಗಿ ನಿರ್ವಹಿಸಲಾಗುವುದು, ನೂರು ದಿವಸಗಳಲ್ಲಿ ಜನರು ಸರಕಾರಕ್ಕೆ ಬೆಂಬಲ ನೀಡಿದ್ದು, ಇನ್ನು ಮುಂದೆಯೂ ಅವರು ಬೆಂಬಲಿಸಲಿದ್ದಾರೆಂದು ಮುಖ್ಯಮಂತ್ರಿ ಆಶಾವಾದ ವ್ಯಕ್ತಿಪಡಿಸಿದ್ದಾರೆ. ಎಲ್‌ಡಿಎಫ್ ಸರಕಾರಕ್ಕೆ ನೂರನೆ ದಿನ ಪೂರ್ತಿಯಾದ ಸಂದರ್ಭದಲ್ಲಿ ಮನ್‌ಕಿಬಾತ್ ಮಾದರಿಯಲ್ಲಿ ಪಿಣರಾಯಿವಿಜಯನ್ ಜನರನ್ನುದ್ದೇಶಿಸಿ ರೇಡಿಯೊದಲ್ಲಿ ಮಾತಾಡುತ್ತಾ ಈ ರೀತಿ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ. ಮಕ್ಕಳಲ್ಲಿ ಮಾದಕವಸ್ತು ಸೇವನೆ ಪ್ರವೃತ್ತಿಯನ್ನು ತಡೆಯಲಿಕ್ಕಾಗಿ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಮಹಾವಿಪತ್ತನ್ನು ಕೇರಳದಿಂದ ಕಿತ್ತೆಸೆಯಲು ತಂದೆತಾಯಿಗಳು ಕೂಡಾ ಸರಕಾರಕ್ಕೆ ನೆರವು ನೀಡಬೇಕು. ವಿಷಾಂಶಗಳಿಲ್ಲದ ತರಕಾರಿ ಬೆಳೆದು ಆಹಾರದಲ್ಲಿ ಸ್ವಾಯತ್ತೆಯನ್ನು ಗಳಿಸಬೇಕು. ಮಹಿಳಾಸುರಕ್ಷೆಗೆ, ಬೆಲೆಯೇರಿಕೆ ತಡೆಯಲು, ಉದ್ಯೋಗಸೃಷ್ಟಿಸಲು ಸರಕಾರದ ಪ್ರಯತ್ನ ಮುಂದುವರಿಯಲಿದೆ.ಇದರಿಂದಾದ ಬದಲಾವಣೆ ರಾಜ್ಯದಲ್ಲಿ ಕಾಣಿಸಿಕೊಳ್ಳಲಾರಂಭಿಸಿದೆಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಐದು ವರ್ಷದಲ್ಲಿ ಮಾಲಿನ್ಯಮುಕ್ತಕೇರಳಕ್ಕಾಗಿ ಕೆಲಸವನ್ನು ಕೂಡಲೇ ಆರಂಭಿಸಲಾಗುವುದು. ಶುಚೀಕರಣಕ್ಕೆ, ಪರಿಸರ ಸಂರಕ್ಷಣೆಗೆ ಹೊಸ ಹೊಸ ಯೋಜನೆಗಳನ್ನು ರೂಪಿಸಲಾಗುವುದು. ಕೇರಳ ಪಿರವಿ ದಿನದಂದು ಶೇ 100ರಷ್ಟು ಶೌಚಾಲಯಗಳು ಪ್ರತಿಯೊಂದು ಮನೆಯಲ್ಲಿರುವುದನ್ನು ದೃಢಪಡಿಸಿಕೊಳ್ಳಲಾಗುವುದು. ದಕ್ಷಿಣ ಭಾರತದಲ್ಲಿ ಮೊದಲ ಬಯಲು ಶೌಚಾಲಯ ಮುಕ್ತ ರಾಜ್ಯವಾಗುವತ್ತ ಕೇರಳ ದಾಪುಗಾಲಿಡುತ್ತಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X