Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿ.ಎ.ಕಾಲೇಜಿನಲ್ಲಿ ‘ಯುರೇಕಾ’...

ಪಿ.ಎ.ಕಾಲೇಜಿನಲ್ಲಿ ‘ಯುರೇಕಾ’ ಅಂತಾರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Sept 2016 6:16 PM IST
share
ಪಿ.ಎ.ಕಾಲೇಜಿನಲ್ಲಿ ‘ಯುರೇಕಾ’ ಅಂತಾರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

ಕೊಣಾಜೆ, ಸೆ.1: ದೇಶದ ಅಭಿವೃಧ್ಧಿಯಲ್ಲಿ ಸಂಶೋಧನೆಯ ಪಾತ್ರ ಮಹತ್ವಪೂರ್ಣವಾದುದು. ಯಾವುದೇ ಸಂಶೋಧನೆಯು ಪೂರ್ಣಗೊಂಡು ಯಶಸ್ವಿಯಾಗಬೇಕಾದರೆ ಸಂಶೋಧನಾ ವಿಷಯದಲ್ಲಿ ಆಳವಾಗಿ ತೊಡಗಿಸಿಕೊಳ್ಳುವುದು ಅಗತ್ಯ. ನಮ್ಮ ಅರಿವಿನ ವಿಸ್ತಾರ ಹಾಗೂ ಪರಿಶ್ರಮದಿಂದ ಸಂಶೋಧನೆಯ ಯಶಸ್ಸನ್ನು ಕಾಣಲು ಸಾಧ್ಯ ಎಂದು ಮಲೇಷ್ಯಾದ ಐಐಯುಎಂನ ಪ್ರೊಫೆಸರ್ ಡಾ.ಎಸ್.ಎ.ಖಾನ್ ಅಭಿಪ್ರಾಯಪಟ್ಟರು.

ಅವರು ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಂಶೋಧನೆ, ಸಂಶೋಧನಾ ಬರವಣಿಗೆ ಹಾಗೂ ಪ್ರಕಾಶನ’ ಎಂಬ ವಿಷಯದಲ್ಲಿ 3 ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಕಾರ್ಯಾಗಾರವನ್ನು ಗುರುವಾರ ಪಿ.ಎ.ಕಾಲೇಜು ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.

ಇತ್ತೀಚೆಗೆ ಸಂಶೋಧನಾ ಕ್ಷೇತ್ರಕ್ಕೆ ಉತ್ತಮ ಪ್ರೋತ್ಸಾಹ ಸಿಗುತ್ತಿದ್ದು ಈ ನಿಟ್ಟಿನಲ್ಲಿ ಸಂಶೋಧನೆಯ ಮಹತ್ವವನ್ನು ನಾವು ಅರಿತುಕೊಂಡು ಮುನ್ನಡೆಯಬೇಕಾದ ಅಗತ್ಯತೆ ಇದೆ. ಇಂತಹ ಕಾರ್ಯಾಗಾರಗಳು ಇದಕ್ಕೆ ಪೂರಕವಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆಎಸ್‌ಎ ದಮ್ಮಾಮ್ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕ ಡಾ.ಅಬ್ದುಲ್ ಮುಜೀಬ್, ಇಂದು ಅದೆಷ್ಟೋ ಸರಕಾರಿ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳು ಹುಟ್ಟಿಕೊಳ್ಳುತ್ತಿವೆ. ಆದರೆ ಕೇವಲ ವಿಶ್ವವಿದ್ಯಾನಿಲಯಗಳು ಹುಟ್ಟಿಕೊಂಡರೆ ಮಾತ್ರ ಸಾಲದು. ಮೌಲ್ಯಯುತ ವಿದ್ಯಾರ್ಥಿಗಳೂ ಸೃಷ್ಟಿಯಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಇಂದು ಅಮೂಲಾಗ್ರ ಬದಲಾವಣೆಗಳು ಕಾಣುತ್ತಿದ್ದು ಸಂಶೋಧನಾ ಕ್ಷೇತ್ರಕ್ಕೂ ಒತ್ತು ನೀಡಲಾಗುತ್ತಿದೆ. ಸಮಾಜದಲ್ಲಿ ಎದುರಾಗುವ ಅದೆಷ್ಟೋ ಸವಾಲುಗಳಿಗೆ ಸಂಶೋಧನೆಯ ಮೂಲಕ ಪರಿಹಾರವನ್ನು ಕಾಣಲು ಸಾಧ್ಯ. ಅಲ್ಲದೆ, ಸಂಶೋಧನೆ ಕೇವಲ ಅಧ್ಯಾಪನ ಅಥವಾ ಭಡ್ತಿಗೆ ಮಾತ್ರವಲ್ಲ ದೇಶದ ಅಭಿವೃದ್ಧಿಗೂ ಪ್ರೇರಕ ಶಕ್ತಿಯಾಗಬೇಕು ಎಂದು ಹೇಳಿದರು.

ಪಿ.ಎ.ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ಅಬ್ದುಲ್ ಶರೀಫ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಈ ಅಭಿವೃದ್ಧಿಯ ಪ್ರಕ್ರಿಯೆಯಲ್ಲಿ ಸಂಶೋಧನೆಯು ಅಭಿವೃದ್ದಿಯ ಮಾಪನವಾಗಿದೆ. ಯಾವುದೇ ಸಂಶೋಧನೆಯು ಯಶಸ್ವಿಯಾಗಬೇಕಾದರೆ ಅಪಾರವಾದ ಜ್ಞಾನಸಂಗ್ರಹದ ಜೊತೆಗೆ ಸಂಶೋಧನೆಯ ವಿಧಾನಗಳನ್ನು ಸಮರ್ಪಕವಾಗಿ ಅರಿತಿರಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರವು ಉಪಯುಕ್ತವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಎಸ್‌ಎ ದಮ್ಮಾಮ್ ವಿವಿಯ ಸಹ ಪ್ರಾಧ್ಯಾಪಕ ಡಾ.ರಿತೇಶ್ ಜಾರ್ಜ್ ಮಿನೇಜಸ್, ಪಿ.ಎ.ಕಾಲೇಜಿನ ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ.ಎ.ಜೆ.ಆಂಥನಿ, ಸಂಶೋಧನಾ ಡೀನ್ ಝಹೀದ್ ಅನ್ಸಾರಿ, ಪಿ.ಎ.ಕಾಲೇಜು ಆಡಳಿತ ನಿರ್ದೇಶಕ ಡಾ.ಸರ್ಫ್ರಾಝ್ ಹಾಸಿಂ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಾಗಾರದ ಸಂಘಟಕ, ಉಪಪ್ರಾಂಶುಪಾಲ ಡಾ.ರಮೀಝ್ ಎಂ.ಕೆ. ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರೊ.ಸಿರಾಜುದ್ದೀನ್ ವಂದಿಸಿದರು. ಫಾತಿಮತ್ ರೆಹನಾ ಹಾಗೂ ನಬಿಲ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X