Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.2ರಂದು ಅಖಿಲ ಭಾರತ ಬಂದ್: ಯಾವೆಲ್ಲಾ...

ಸೆ.2ರಂದು ಅಖಿಲ ಭಾರತ ಬಂದ್: ಯಾವೆಲ್ಲಾ ಸೇವೆಗಳು ಇರುತ್ತವೆ? ಏನೆಲ್ಲಾ ಇರುವುದಿಲ್ಲ?

ವಾರ್ತಾಭಾರತಿವಾರ್ತಾಭಾರತಿ1 Sept 2016 7:54 PM IST
share
ಸೆ.2ರಂದು ಅಖಿಲ ಭಾರತ ಬಂದ್: ಯಾವೆಲ್ಲಾ ಸೇವೆಗಳು ಇರುತ್ತವೆ? ಏನೆಲ್ಲಾ ಇರುವುದಿಲ್ಲ?

ಮಂಗಳೂರು, ಸೆ.1:ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆ.2ರಂದು ಹಮ್ಮಿಕೊಂಡಿರುವ ಸಾರ್ವತ್ರಿಕರ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳಿಂದ ವ್ಯಾಪಕವಾದ ಬೆಂಬಲ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಕಂಡು ಬರುತ್ತಿದೆ.

ಹಾಲು ವಿತರಣೆ, ಮೆಡಿಕಲ್ ಶಾಪ್, ಆಸ್ಪತ್ರೆಯ ವಾಹನಗಳು, ಮದುವೆ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಉಳಿದಂತೆ ಖಾಸಗಿ ಬಸ್ಸುಗಳ ನೌಕರರು, ವ್ಯಾಪಾರಿಗಳು,ಕೈಗಾರಿಕಾ ಘಟಕದ ಕಾರ್ಮಿಕರು,ಬೀಡಿ ಕಾರ್ಮಿಕರು,ಬೀದಿ ಬದಿಯ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳಲ್ಲಿ ದುಡಿಯುವ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಷ್ಕರಕ್ಕೆ ಕರೆ ನೀಡಿರುವ ಮುಖಂಡರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಖಾಸಗಿ ಬಸ್ಸು ಸಂಚಾರವೂ ಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಬಸ್ಸು ಮಾಲಕರ ಸಂಘದ ಮುಖಂಡರು ತಿಳಿಸಿದ್ದಾರೆ. ಕೆಎಸ್ಸಾರ್ಟಿಸಿ ಬಸ್‌ಗಳು ಬೆಳಗ್ಗಿನ ಹೊತ್ತು ಸಂಚರಿಸುವ ಅನಿಶ್ಚಿತತೆಯನ್ನು ಹೊಂದಿದ್ದು ಸೆ.2ರಂದು ಸಂಜೆ 6 ಗಂಟೆಯ ಬಳಿಕ ರಾತ್ರಿ ಸಂಚಾರದ ಬಸ್ಸುಗಳು ಎಂದಿನಂತೆ ಸಂಚಾರ ನಡೆಸಲಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಬಂದ್ ನಿಂದ ದ.ಕ ಜಿಲ್ಲೆಯಲ್ಲಿ ಪರಿಣಾಮ ಉಂಟಾಗಬಹುದಾದ ಕ್ಷೇತ್ರಗಳು

  • ಮಂಗಳೂರು ನಗರ, ಗ್ರಾಮಾಂತರ, ದ.ಕ.-ಉಡುಪಿ, ದ.ಕ.-ಕಾಸರಗೋಡು, ಸುಳ್ಯ-ಮಡಿಕೇರಿ ನಡುವೆ ಸಂಚರಿಸುವ ಖಾಸಗಿ ಬಸ್ ಸಂಚಾರವೂ ಬಹುತೇಕ ಸ್ಥಗಿತಗೊಳ್ಳುವ ಸೂಚನೆ ಕಂಡು ಬಂದಿದೆ.
  • ಕೆಎಸ್ಸಾರ್ಟಿಸಿ ಬಸ್ಸು ಸಂಚಾರದಲ್ಲೂ ವ್ಯತ್ಯಯವಾಗುವ ಸಾಧ್ಯತೆ ಇದೆ.
  • ನಗರದ ತರಕಾರಿ,ಹೂ,ಹಣ್ಣಿನ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಸೆಂಟ್ರಲ್ ಮಾರ್ಕೆಟ್‌ನ ವ್ಯಾಪಾರಸ್ಥರ ಸಂಘಟನೆ ಬಂದ್‌ಗೆ ಬೆಂಬಲ ಸೂಚಿಸಿದೆ.
  • ನಗರದ ಸ್ಟೇಟ್ ಬ್ಯಾಂಕ್ ಬಳಿಯ ಮೀನು ಮಾರುಕಟ್ಟೆ, ಒಣ ಮೀನು ಮಾರುಕಟ್ಟೆಯ ಬಹುತೇಕ ವರ್ತಕರು ಬಂದ್ ಸಂದರ್ಭದಲ್ಲಿ ವ್ಯಾಪಾರ ಸ್ಥಗಿತಗೊಳಿಸುವ ಬಗ್ಗೆ ಸೂಚನೆ ನೀಡಿದ್ದಾರೆ.
  • ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಮೂಲಕ ಸೆ.2ರಂದು ನಡೆಯಲಿರುವ ಪರೀಕ್ಷೆಗಳನ್ನು ಮುಂದೂಡಲಾಗಿದೆ.
  • ಕೆಲವು ಖಾಸಗಿ ವಾಣಿಜ್ಯ ಸಂಸ್ಥೆಗಳು ಕಾರ್ಮಿಕರು ಗೈರು ಹಾಜರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಜೆ ಘೋಷಿಸಿದೆ.
  • ಬಂದ್‌ನಲ್ಲಿ ಹಲವು ಕಾರ್ಮಿಕ ಸಂಘಟನೆಗಳು ಪಾಲ್ಗೊಳುವ ಕಾರಣದಿಂದ ಬಹತೇಕ ಅಂಗಡಿ,ಹೊಟೇಲ್ ,ಇತರ ವ್ಯಾಪಾರಸ್ಥರ ಮಳಿಗೆಗಳು ಮುಚ್ಚಬೇಕಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.
  • ಕೆಲವು ಶಾಲೆ ,ಕಾಲೇಜುಗಳು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಶಾಲೆಗೆ ಹಾಜರಾಗಲು ವಾಹನ ಸೌಕರ್ಯದ ಸಮಸ್ಯೆ ಇರುವ ಕಡೆ ರಜೆ ನೀಡುವ ಬಗ್ಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಜಿಲ್ಲೆಯ ಶಾಲೆಗಳಿಗೆ ಅಧಿಕೃತವಾಗಿ ರಜೆ ಘೋಷಿಸದೆ ಇದ್ದರೂ ಬಸ್ಸು ಸಂಚಾರ ಸ್ಥಗಿತಗೊಂಡರೆ ಶಾಲೆಗಳು ಕಾರ್ಯಾಚರಣೆ ಮಾಡುವ ಸಾಧ್ಯತೆ ಕಡಿಮೆ.
  • ಕೆಲವು ರಿಕ್ಷಾ,ಟ್ಯಾಕ್ಸಿ ಹಾಗೂ ಇತರ ಖಾಸಗಿ ವಾಹನಗಳ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ.

ಬಂದ್ ಸಂದರ್ಭದಲ್ಲಿ ಇರಬಹುದಾದ ಸೌಲಭ್ಯಗಳು

  • ರಾಜ್ಯ ಹಾಗೂ ಕೇಂದ್ರ ಸರಕಾರದ ಎಲ್ಲಾ ಸರಕಾರಿ ಕಚೇರಿಗಳು ತೆರೆದಿರುತ್ತವೆ. (ಸಾರಿಗೆ ಸೌಲಭ್ಯ ಇಲ್ಲದಿದ್ದಲ್ಲಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಕಂಡುಬರುವ ಸಾಧ್ಯತೆ)
  • ಅಂಚೆ ಕಚೇರಿ, ರೈಲ್ವೆ, ವಿಮಾನ ನಿಲ್ದಾಣಗಳ ಸೇವೆ ಎಂದಿನಂತೆ ಮುಂದುವರಿಯಲಿದೆ. ಹಾಗೂ ಸಂಜೆ 6 ಗಂಟೆಯ ನಂತರ ಕೆಎಸ್ಸಾರ್ಟಿಸಿ ಬಸ್ ಸಂಚಾರ ಎಂದಿನಂತೆ ಮುಂದುವರಿಯಲಿದೆ.
  • ಬಂದ್ ಬೆಂಬಲಿಸದೆ ಇರುವ ಕೆಲವು ಸಂಘಟನೆಗಳ ಅಂಗಡಿ, ಮುಂಗಟ್ಟುಗಳು ತೆರೆದಿರುವ ಸಾಧ್ಯತೆ ಇದೆ.
  • ಹಾಲು,ದಿನಪತ್ರಿಕೆ,ಆ್ಯಂಬುಲೆನ್ಸ್ ಸೇವೆ,ಮದುವೆ ವಾಹನಗಳಿಗೆ,ಮೆಡಿಕಲ್ ಶಾಪ್‌ಗಳು,ಆಸ್ಪತ್ರೆ ಸೇರಿದಂತೆ ತುರ್ತ ಸೇವೆಗಳಿಗೆ ಬಂದ್‌ನಿಂದ ವಿನಾಯಿತಿ ಹೊಂದಿದೆ.

ಬಂದ್ ಬಗ್ಗೆ ಅಧಿಕಾರಿಗಳ, ಖಾಸಗಿ ಸಂಘಟನೆಗಳ ಮುಖಂಡರ ಹೇಳಿಕೆಗಳು

ಬಂದ್‌ಗೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಯಾವುದೇ ತೀರ್ಮಾನ ಕೈ ಗೊಂಡಿಲ್ಲ

-ದ.ಕ ಜಿಲ್ಲಾಧಿಕಾರಿ.

ಕೆಎಸ್ಸಾರ್ಟಿಸಿ ಬಂದ್‌ನಲ್ಲಿ ಪಾಲ್ಗೊಳ್ಳುವುದಿಲ್ಲ. ಪರಿಸ್ಥಿತಿಯನ್ನು ಗಮನಿಸಿಕೊಂಡು ಬಸ್‌ಗಳನ್ನು ಓಡಿಸಲಾಗುವುದು. ಸಂಜೆ 6ಗಂಟೆಯ ನಂತರ ರಾತ್ರಿ ಬಸ್ಸುಗಳು ಎಂದಿನಂತೆ ಸಂಚರಿಸಲಿವೆ.

- ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣ ಅಧಿಕಾರಿ.

ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಚಾಲಕ, ನಿರ್ವಾಹಕರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣದಿಂದ ಬಹುತೇಕ ಖಾಸಗಿ ಬಸ್ಸುಗಳ ಸಮಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ 

- ಅಝೀಝ್ ಪರ್ತಿಪ್ಪಾಡಿ ದ.ಕ ಬಸ್ಸು ಮಾಲಕರ ಸಂಘದ ಅಧ್ಯಕ್ಷ.

ಕೇಂದ್ರ ಮಾರುಕಟ್ಟೆಯ ವ್ಯಾಪಾರಿಗಳ ಸಭೆ ಕರೆದು ಸೆ.2ರ ಬಂದ್‌ನಲ್ಲಿ ಪಾಲ್ಗೊಳ್ಳುವ ಕಾರಣ ಕೇಂದ್ರ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳ್ಳಲಿದೆ.

- ಹಮೀದ್ ಕಂದಕ್ ಕೇಂದ್ರ ಮಾರುಕಟ್ಟೆ ವ್ಯಾಪಾರಿಗಳ ಸಂಘಟನೆಗಳ ಅಧ್ಯಕ್ಷ.

ಜಿಲ್ಲೆಯ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿಲ್ಲ.

- ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X