Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರ:...

ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರ: ತನಿಖೆ ಸೂಚನೆ

ತ್ರೈಮಾಸಿಕ ಸಭೆೆಯಲ್ಲಿ ಶಾಸಕರಿಂದ ಅಧಿಕಾರಿಗಳಿಗೆ ತರಾಟೆ

ವಾರ್ತಾಭಾರತಿವಾರ್ತಾಭಾರತಿ1 Sept 2016 9:46 PM IST
share
ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರ: ತನಿಖೆ ಸೂಚನೆ

ಮೂಡಿಗೆರೆ, ಸೆ.1: ಪಡಿತರ ಚೀಟಿ ವಿತರಣೆಯಲ್ಲಿ ಉಳ್ಳವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಸಲುವಾಗಿ ಬಿಪಿಎಲ್ ಕಾರ್ಡ್ ವಿತರಣೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತನಗೆ ತಿಳಿಯಬೇಕು. ಈ ಬಗ್ಗೆ ವರದಿ ನೀಡಬೇಕೆಂದು ಶಾಸಕ ಬಿ.ಬಿ.ನಿಂಗಯ್ಯ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಅವರು ತಾಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಡಿತರ ಚೀಟಿ ವಿತರಣೆಯಾಗಿರುವ ಬಗ್ಗೆ ಮಾಹಿತಿ ಪಡೆದ ಅವರು, ಕಳೆದ ನಾಲ್ಕೈದು ವರ್ಷಗಳಿಂದ ವಿತರಣೆಯಾಗುತ್ತಿರುವ ಪಡಿತರ ಚೀಟಿಯಲ್ಲಿ ಬಿಪಿಎಲ್ ಕಾರ್ಡ್‌ನ್ನು ಅರ್ಹರಿಗೆ ನೀಡದೆ ಉಳ್ಳವರಿಗೆ ನೀಡಲಾಗಿದೆ. ಇದು ಹೇಗೆ ಸಾಧ್ಯವಾಗಿದೆ. ಈ ವರ್ಷದಲ್ಲಿ 2 ಸಾವಿರ ಬಿಪಿಎಲ್ ಪಡಿತರ ಚೀಟಿ ರದ್ದಾಗಿರುವುದನ್ನು ಗಮನಿಸಿದರೆ ಇದರಲ್ಲಿ ಭ್ರಷ್ಟಾಚಾರ ನಡೆದಿದೆ. ಇಷ್ಟೆಲ್ಲಾ ಕಾರ್ಡ್‌ಗಳನ್ನು ವಿತರಣೆ ಮಾಡಿದ ಸಂದರ್ಭದಲ್ಲಿ ತಹಶೀಲ್ದಾರರು, ಗ್ರಾಮ ಲೆಕ್ಕಿಗರು ಯಾರು ಇದ್ದರೆಂಬುದು ಪರಿಶೀಲನೆ ನಡೆಸಿ ವರದಿ ನೀಡಬೇಕು. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ತಿಳಿಸಿದರು.

ಜಿಪಂ ವತಿಯಿಂದ ತಾಲೂಕಿನಲ್ಲಿ ಅನೇಕ ಕಾಮಗಾರಿಗಳು ನಡೆಯುತ್ತಿದ್ದು, ಅದು ಜನಪ್ರತಿನಿಧಿಗಳ ಗಮನಕ್ಕೆ ಬರುತ್ತಿಲ್ಲ. ಗಿರಿಜನ ಕಾಲನಿ ಸೇರಿದಂತೆ ವಿವಿಧ ಕಾಂಕ್ರಿಟ್ ಕಾಮಗಾರಿಗಳಿಗೆ ಜಿಪಂ ಎಇಇ ಮತ್ತು ಇಂಜಿನಿಯರ್‌ಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕ್ರಿಯಾಯೋಜನೆ ತಯಾರಿಸಿ ಅದಕ್ಕೆ ಹಣ ತಂದು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳ ಗಮನಕ್ಕೆ ತರದೇ ಕೆಲಸ ಮಾಡುವುದರ ಜೊತೆಗೆ ಹಣಕ್ಕಾಗಿ ಕಳಪೆ ಕಾಮಗಾರಿಗಳನ್ನೆ ಹೆಚ್ಚಾಗಿ ಮಾಡುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಡಾ.ಮೋಟಮ್ಮ ಮಾತನಾಡಿ, ನಿರಾಶ್ರಿತರಿಗೆ ಸೈಟ್ ನೀಡಲು ಸರಕಾರದಿಂದ ಆದೇಶವಿದ್ದರೂ ಜಾಗ ನೀಡಲು ನಿಮಗೇನು ಕಷ್ಟ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮರೆಬೈಲು, ಹಂತೂರು, ಬಾನಳ್ಳಿ ಭಾಗದಲ್ಲಿ ಹಕ್ಕು ಪತ್ರ ನೀಡಿದ್ದಾರೆ. ಆದರೆ ಹಂತೂರು ಭಾಗದ ನಿರಾಶ್ರಿತರಿಗೆ ಇದುವರೆಗೂ ಹಕ್ಕು ಪತ್ರ ನೀಡಿಲ್ಲ. ಅದನ್ನು ಶೀಘ್ರವಾಗಿ ವಿತರಣೆ ಮಾಡಬೇಕು ಎಂದ ಅವರು, ಸರಕಾರದ ಯೋಜನೆ ಬಗ್ಗೆ ಆಯಾ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆೆ ನಡೆಸಿ ಜನರಿಗೆ ಮಾಹಿತಿ ನೀಡಬೇಕು. ಯೋಜನೆಗಳನ್ನು ಜನರಿಗೆ ತಲುಪುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ತಾಪಂ ಅಧ್ಯಕ್ಷ ರತನ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಕುಡಿಯುವ ನೀರಿಗೆ ಕೆಲ ಭಾಗಗಳಲ್ಲಿ ಬರ ಬಂದಿತ್ತು. ಈ ವರ್ಷ ಮಳೆಯಿಲ್ಲದೆ ಮುಂದಿನ ವರ್ಷದಲ್ಲಿ ಎಲ್ಲ ಕಡೆಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು. ಆದ್ದರಿಂದ ಮುಂಜಾಗ್ರತೆಯನ್ನು ಈಗಲೇ ಮಾಡಬೇಕಾಗಿದ್ದು, ಪ್ರತಿ ಗ್ರಾಪಂನಲ್ಲಿ 14ನೆ ಹಣಕಾಸು ಯೋಜನೆಯಲ್ಲಿ ಒಂದೊಂದು ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X