ದೇಶಾದ್ಯಂತ ಇಂದು ಮುಷ್ಕ ರ
ಚಿಕ್ಕಮಗಳೂರು: ಶಾಲಾ ಕಾಲೇಜುಗಳಿಗೆ ರಜೆ ಚಿಕ್ಕಮಗಳೂರು, ಸೆ.1: ವಿವಿಧ ಕಾರ್ಮಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆ.2ಕ್ಕೆ ಮುಷ್ಕರಕ್ಕೆ ಕರೆಕೊಟ್ಟಿದ್ದು, ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಸತ್ಯವತಿ ತಿಳಿಸಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಸೆ.2ಕ್ಕೆ ನಡೆಯಲಿರುವ ಮುಷ್ಕರದ ಹಿನ್ನೆಲೆಯಲ್ಲಿ ಕರೆದಿದ್ದ ತುರ್ತು ಸಭೆಯಲ್ಲಿ ಮಾತನಾಡಿದರು. ಮುಷ್ಕರದ ವೇಳೆಯಲ್ಲಿ ಸಾರ್ವ ಜನಿಕರಿಗೆ ಅಗತ್ಯ ಸರಕು ಮತ್ತು ಸೇವೆಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎ ಲ್.ವೈಶಾಲಿ, ಕೆಎಸ್ಸಾರ್ಟಿಸಿ ಅಧಿಕಾರಿ ಅನಿಲ್‌ಕುಮಾರ್, ಡಿಡಿಪಿಐ ಎಸ್.ಜಿ.ನಾಗೇಶ್, ವಾರ್ತಾಧಿಕಾರಿ ಬಿ.ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವರಾಜ್ ಪಾಟೀಲ್ ಹಾಗೂ ಮತ್ತಿತರರು ಇದ್ದರು.
ಇಂದು ಸಾರಿಗೆ ವಾಹನಗಳ ಚಾಲನೆಯಲ್ಲಿ ವ್ಯತ್ಯಯವಾಗುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇದಕ್ಕೆ ಪರ್ಯಾಯವಾಗಿ ಮುಂದಿನ ದಿನಗಳಲ್ಲಿ ರವಿವಾರದಂದು ಶಾಲೆಯನ್ನು ನಡೆಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
<ಜಿ. ಸತ್ಯವತಿ ಜಿಲ್ಲಾಧಿಕಾರಿ ಚಿಕ್ಕಮಗಳೂರು





