Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾಯಯಮಂಡಳಿ ಸಲಹೆ ಸ್ವಾಗತಾರ್ಹ:...

ನ್ಯಾಯಯಮಂಡಳಿ ಸಲಹೆ ಸ್ವಾಗತಾರ್ಹ: ಸಿದ್ದರಾಮಯ್ಯ

ಮಹಾದಾಯಿ ನದಿ ನೀರು ಹಂಚಿಕೆ ವಿವಾದ

ವಾರ್ತಾಭಾರತಿವಾರ್ತಾಭಾರತಿ1 Sept 2016 11:46 PM IST
share
ನ್ಯಾಯಯಮಂಡಳಿ ಸಲಹೆ ಸ್ವಾಗತಾರ್ಹ: ಸಿದ್ದರಾಮಯ್ಯ

ಬೆಂಗಳೂರು, ಸೆ.1: ಮಹಾದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳುವಂತೆ ನ್ಯಾಯಮಂಡಳಿ ನೀಡಿರುವ ಸಲಹೆಯನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಕುರಿತು ಪ್ರಧಾನಿ ಹಾಗೂ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ನ್ಯಾಯಮಂಡಳಿ ಹೇಳಿರುವುದು ಒಳ್ಳೆಯ ಬೆಳವಣಿಗೆ. ನ್ಯಾಯ ಮಂಡಳಿಯೇ ಸಲಹೆ ನೀಡಿರುವುದರಿಂದ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಗೆ ಸಿದ್ಧರಾಗ ಬಹುದು. ನಾವಂತೂ ತಯಾರಿದ್ದೇವೆ ಎಂದರು.

 ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ಸರ್ವಪಕ್ಷ ಮುಖಂಡರೊಂದಿಗೆ ಭೇಟಿಯಾದಾಗ ಮತ್ತು ಬರಗಾಲ ಕುರಿತಾದ ಚರ್ಚೆಗೆ ಹೋದಾಗಲೂ ಪ್ರಧಾನಿಯವರಿಗೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು. ನ್ಯಾಯ ಮಂಡಳಿ ಸಲಹೆ ನೀಡಿದ ಬಳಿಕ ಗೋವಾ, ಮಹಾರಾಷ್ಟ್ರ ಪರ ವಕೀಲರು ನಮ್ಮ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ನಾವೂ ಸಲಹೆ ನೀಡುತ್ತೇವೆ ಎಂದಿದ್ದಾರೆ. ನಮ್ಮ ವಕೀಲರೂ ಇದೇ ಮಾತು ಹೇಳಿದ್ದಾರೆ. ಇದು ಸ್ವಾಗತಾರ್ಹ. ಇದ್ಕಕಾಗಿ ನ್ಯಾಯ ಮಂಡಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು. ವಿವಾದವನ್ನು ಬಗೆಹರಿಸಲು ತಾವು ಮಧ್ಯೆಪ್ರವೇಶ ಮಾಡಬೇಕು ಎಂದು ಪ್ರಧಾನಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಜಲ ಸಂಪನ್ಮೂಲ ಸಚಿವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸುವಂತೆ ಪತ್ರ ಮೂಲಕ ಗೋವಾ ಮುಖ್ಯಮಂತ್ರಿಗಳನ್ನೂ ಕೋರಲಾಗಿತ್ತು. ಈಗ ನ್ಯಾಯ ಮಂಡಳಿಯೇ ಸಲಹೆ ನೀಡಿರುವುದರಿಂದ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಗೆ ಮುಂದಾಗಬಹುದು. ನಾವೂ ತಯಾರಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು. ಪ್ರಧಾನಿ, ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಶೀಘ್ರವೇ ಪತ್ರ ಬರೆಯುತ್ತೇನೆ. ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿಯನ್ನೂ ಕೋರುತ್ತೇನೆ. ಮಾತುಕತೆಗೆ ಬೆಂಗಳೂರಿಗೆ ಬರುವಂತೆ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗುವುದು. ಒಂದು ವೇಳೆ ಗೋವಾ ಅಥವಾ ಮಹಾರಾಷ್ಟ್ರ ಸಿಎಂ ಕರೆದರೂ ಮಾತುಕತೆಗೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಪ್ರಧಾನಿ ಏನಾದರೂ ಕರೆದರೆ ದಿಲ್ಲಿಗೆ ಹೋಗುತ್ತೇವೆ. ನನ್ನ ಪ್ರಕಾರ ಪ್ರಧಾನಿ ಸಭೆ ಕರೆಯುವುದೇ ಒಳ್ಳೆಯದು. ಮಾತುಕತೆ ಮೂಲಕ ವಿವಾದ ಇತ್ಯರ್ಥ್ಯಕ್ಕೆ ನಾವು ಸಿದ್ಧವಿರುವಾಗ ಎಲ್ಲಾದರೂ ಮಾತುಕತೆ ನಡೆಯಲಿ ಹೋಗಲು ತಯಾರು ಎಂದು ಮುಖ್ಯಮಂತ್ರಿ ತಿಳಿಸಿದರು. ಬಂದ್, ಮುಂಜಾಗ್ರತೆ: ಕಾರ್ಮಿಕ ಸಂಘಟನೆಗಳು ಶುಕ್ರವಾರ ಭಾರತ್ ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ನಿಂದ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಿದ್ಧತೆ ಮಾಡಿ ಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
 ಜಿಎಸ್‌ಟಿ ವಿಧೇಯಕ: ಜಿಎಸ್‌ಟಿ ವಿಧೇಯಕಕ್ಕೆ ಅನುಮೋದನೆ ನೀಡಲು ಸೆ.14ರಂದು ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಕರೆಯಲಾಗಿದೆ. ಈಗಾಗಲೇ ಹಲವಾರು ರಾಜ್ಯಗಳು ವಿಧೇಯಕಕ್ಕೆ ಒಪ್ಪಿಗೆ ನೀಡಿವೆ. ಹೊಸ ತೆರಿಗೆ ನೀತಿಯಿಂದ ರಾಜ್ಯಕ್ಕೆ ಆಗುವ ನಷ್ಟವನ್ನು ತುಂಬಿಕೊಡುವಂತೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
 ಈ ಕುರಿತು ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಇದು ಯುಪಿಎ ಸರಕಾರದ ಕೂಸು. ನಾವೂ ಅದಕ್ಕೆ ಒಪ್ಪಿಗೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು. ಮುಖ್ಯಕಾರ್ಯದರ್ಶಿ ನೇಮಕ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ನೇಮಕದ ಕುರಿತು ಪ್ರತಿಕ್ರಿಯಿಸಿರುವ ಅವರು, ಮುಖ್ಯ ಕಾರ್ಯದರ್ಶಿಗಳ ಸೇವಾ ಅವಧಿಯನ್ನು ಕೇಂದ್ರ ಸರಕಾರ ಮೂರು ತಿಂಗಳು ವಿಸ್ತರಿಸಿದೆ. ಸೆ.30ಕ್ಕೆ ಅವರ ಅವಧಿ ಅಂತ್ಯಗೊಳ್ಳಲಿದೆ. ಹೊಸ ಮುಖ್ಯ ಕಾರ್ಯದರ್ಶಿ ನೇಮಕ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹೊಸದಿಲ್ಲಿಗೆ ಸಿಎಂ ಪ್ರಯಾಣ
ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲು ಶುಕ್ರವಾರ ಹೊಸದಿಲ್ಲಿಗೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X