ಇಂದು ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ
ಉಡುಪಿ, ಸೆ.1: ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವುಗಳ ಆಶ್ರಯದಲ್ಲಿ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೆ.2ರಂದು ಅಪರಾಹ್ನ 2:30ಕ್ಕೆ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕಟ್ಟಡ ಉದ್ಘಾಟಿಸುವರು. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





