Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎತ್ತಿನಹೊಳೆ ಯೋಜನೆ ತ್ವರಿತ...

ಎತ್ತಿನಹೊಳೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ1 Sept 2016 11:56 PM IST
share
ಎತ್ತಿನಹೊಳೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಸಿಎಂ ಸೂಚನೆ

ಬೆಂಗಳೂರು, ಸೆ.1: ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನದ ವೇಗವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಎತ್ತಿನಹೊಳೆ ಹಾಗೂ ಕೋರಮಂಗಲ-ಚಲ್ಲಘಟ್ಟ ಕಣಿವೆ ಸಂಸ್ಕರಿಸಿದ ನೀರು ಪೂರೈಕೆ ಯೋಜನೆಯ ಅನುಷ್ಠಾನ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಿದ್ದರು. ಉದ್ದೇಶಿತ ಯೋಜನೆಗಳಿಗೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ 12,912 ಕೋಟಿ ರೂ.ವೆಚ್ಚದ ರಾಜ್ಯ ಸರಕಾರದ ಈ ಮಹತ್ವಾಕಾಂಕ್ಷೆ ಯೋಜನೆ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ. ಯೋಜನಾ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದಲ್ಲಿ, ಅವುಗಳನ್ನು ಕೂಡಲೇ ಸರಕಾರದ ಗಮನಕ್ಕೆ ತನ್ನಿ ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಯೋಜನೆಗೆ ಸಂಬಂಧಪಟ್ಟ ಕೆಲ ಸಮಸ್ಯೆಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಬಗೆಹರಿಸಲು ಸಾಧ್ಯವಾಗದಿರ ಬಹುದು. ಯೋಜನೆಗೆ ಎದುರಾಗುತ್ತಿರುವ ತೊಡಕುಗಳನ್ನು ಸ್ಪಷ್ಟಪಡಿಸಿದಲ್ಲಿ, ಅವುಗಳ ನಿವಾರಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕೂಡಲೇ ಸ್ಪಂದಿಸಿ ಸಭೆಗೆ ಹಾಜರಿದ್ದ ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳನ್ನು ಆಮಂತ್ರಿಸಿ, ಸಮಸ್ಯೆಗಳನ್ನು ಬಗೆಹರಿಸಲು ಮುಂದಾದರು. ಯೋಜನೆ ಅನುಷ್ಠಾನಕ್ಕೆ ಪರಿಸರ ಸಂಬಂಧಿ ಅನುಮತಿಗಳನ್ನು ದೊರಕಿಸಿಕೊಡುವಂತೆ ಅರಣ್ಯ ಇಲಾಖೆ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ಗೆ ಸಿದ್ದರಾಮಯ್ಯ ನಿರ್ದೇಶಿಸಿದರು.

 ಭೂ ಸ್ವಾಧೀನಕ್ಕೆ ಕ್ರಮ: ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೀರಾವರಿ ಸಚಿವ ಎಂ.ಬಿ.ಪಾಟೀಲ್, ಎತ್ತಿನಹೊಳೆ ಮತ್ತು ಕೆಸಿ ವ್ಯಾಲಿ ಯೋಜನೆಗಳಿಗೆ ಅಗತ್ಯವಿರುವ ಭೂ ಸ್ವಾಧೀನ ಮತ್ತು ಅರಣ್ಯ ಇಲಾಖೆಯ ಅನುಮತಿ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಸಮನ್ವಯದಿಂದ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.

 12,912 ಕೋಟಿ ರೂ.ಮೊತ್ತದ ಎತ್ತಿನಹೊಳೆ ಯೋಜನೆಯನ್ನು 5 ಪ್ಯಾಕೇಜ್‌ಗಳಾಗಿ ವಿಂಗಡಿಸಿದ್ದು, 3 ಪ್ಯಾಕೇಜ್‌ಗಳ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಎರಡು ಯೋಜನೆಗಳ ಅನುಷ್ಠಾನದ ವೇಗ ಹೆಚ್ಚಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇದೇ ವೇಳೆ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ, ಉದ್ದೇಶಿತ ಯೋಜನೆಗಳ ಪೈಕಿ ಎತ್ತಿನಹೊಳೆ ಯೋಜನೆಗೆ ಮೊದಲ ಹಂತದಲ್ಲಿ ಒಟ್ಟು 6 ಸಾವಿರ ಹೆಕ್ಟೆರ್‌ನಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಿದ್ದು, ಆ ಪೈಕಿ ಬಗರ್‌ಹುಕುಂ ಸಾಗುವಳಿ ಭೂಮಿಯೂ ಇದೆ. ಈ ಸಂಬಂಧ ಸಾಮಾಜಿಕ ಸಮೀಕ್ಷೆ ಅಗತ್ಯವಿದೆ ಎಂದರು.

ನೂತನ ಭೂ ಸ್ವಾಧೀನ ಕಾಯ್ದೆಯನ್ವಯ ರೈತರಿಗೆ ಹೆಚ್ಚಿನ ಮೊತ್ತದ ಪರಿಹಾರ ನೀಡಬೇಕಿದ್ದು, ಭೂ ಸ್ವಾಧೀನ ಕಾರ್ಯಕ್ಕೆ 2,300ಕೋಟಿ ರೂ. ಬೇಕಾಗುತ್ತದೆ. ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಕೊಂಡು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದರು.

ಸಚಿವರಾದ ಕೆ.ಆರ್.ರಮೇಶ್ ಕುಮಾರ್, ಕೃಷ್ಣ ಭೈರೇಗೌಡ, ರಾಮಲಿಂಗಾ ರೆಡ್ಡಿ, ಸಂಸದ ವೀರಪ್ಪ ಮೊಯ್ಲಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್, ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಂದಾಯ ಇಲಾಖೆಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಎಂ.ಲಕ್ಷ್ಮಿ ನಾರಾಯಣ್, ಮುಖ್ಯಮಂತ್ರಿಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್ ಹಾಗೂ ತುಷಾರ್ ಗಿರಿನಾಥ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ

 ಕೋರಮಂಗಲ-ಚಲ್ಲಘಟ್ಟ ಕಣಿವೆ ಪ್ರದೇಶದಿಂದ ಬೆಂಗಳೂರಿನ ಸಂಸ್ಕರಿಸಿದ ನೀರನ್ನು ಕೋಲಾರದ ಕೆರೆಗಳಿಗೆ ಹರಿಸುವ ಯೋಜನೆಯ ಪೈಪ್‌ಲೈನ್ ಮಾರ್ಗದಲ್ಲಿ ಬೆಳ್ಳಂದೂರು ಬಳಿ ಪ್ರೆಸ್ಟೀಜ್ ಸಂಸ್ಥೆ ಅಪಾರ್ಟ್‌ಮೆಂಟ್ ನಿರ್ಮಿಸಿದ್ದು, ಅದನ್ನು ತೆರವು ಗೊಳಿಸಲಾಗುವುದು. ತ್ಯಾಜ್ಯ ನೀರು ಹರಿಯುವ ನೂರು ಅಡಿಗಳ ಕಾಲುವೆಯನ್ನು ಪ್ರೆಸ್ಟೀಜ್ ಸಂಸ್ಥೆ ಒತ್ತುವರಿ ಮಾಡಿದ್ದು, ಈ ಸಂಬಂಧ ಯಾರೊಬ್ಬರೂ ಸರಕಾರದ ಮೇಲೆ ಒತ್ತಡ ಹೇರಿಲ್ಲ. ತೆರವು ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.

 - ಟಿ.ಬಿ.ಜಯಚಂದ್ರ, ಸಣ್ಣ ನೀರಾವರಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X