Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಣ್ಣೀರುಪಂತ ಗ್ರಾಮ ಪಂಚಾಯತ್‌ನ ಸಾಮಾನ್ಯ...

ತಣ್ಣೀರುಪಂತ ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ2 Sept 2016 6:47 PM IST
share
ತಣ್ಣೀರುಪಂತ ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆ

ಉಪ್ಪಿನಂಗಡಿ, ಸೆ.2: ಕರಾಯ ಗ್ರಾಮದ ತುರ್ಕಳಿಕೆಯಲ್ಲಿರುವ ಒಂದು ಎಕರೆ ಸರಕಾರಿ ಜಮೀನಿನಲ್ಲಿ ನಿವೇಶನರಹಿತ 28 ಮಂದಿಗೆ ನಿವೇಶನ ಹಂಚಲು ತಣ್ಣೀರುಪಂತ ಗ್ರಾಮ ಪಂಚಾಯತ್ ನಿರ್ಣಯ ಕೈಗೊಂಡಿದೆ.

ತಣ್ಣೀರುಪಂಥ ಗ್ರಾಮ ಪಂಚಾಯತ್ ಅಧ್ಯಕ್ಷ ಜಯವಿಕ್ರಮ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಅಳಕೆಯಲ್ಲಿರುವ 13 ಎಕ್ರೆ ಸರಕಾರಿ ಭೂಮಿಯಲ್ಲಿ ಮೂರು ಎಕರೆಯನ್ನು ನಿವೇಶನ ರಹಿತರಿಗಾಗಿ ಕಾಯ್ದಿರಿಸಲಾಗಿದ್ದು, ಕಂದಾಯ ಇಲಾಖೆ ಶೀಘ್ರವೇ ಸರ್ವೇ ನಡೆಸಿ ಮೂರು ಎಕರೆ ಸ್ಥಳವನ್ನು ವಿಭಾಗಿಸಿ ನೀಡುವಂತೆ ಒತ್ತಾಯಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈಗಾಗಲೇ 200ರಷ್ಟು ನಿವೇಶನರಹಿತರ ಅರ್ಜಿಗಳು ಪಂಚಾಯತ್‌ಗೆ ಬಂದಿದ್ದು, ನಿವೇಶನ ಹಂಚಿಕೆ ಸಂದರ್ಭ ಎಲ್ಲಾ ವಾರ್ಡ್‌ಗಳ ನಿವೇಶನ ರಹಿತರನ್ನು ಪರಿಗಣಿಸಿ, ಆದ್ಯತೆ ಮೇರೆಗೆ ಸಮವಾಗಿ ಹಂಚುವಂತೆ ಸದಸ್ಯರು ಈ ಸಂದರ್ಭ ಒತ್ತಾಯಿಸಿದರು.

ತಣ್ಣೀರುಪಂಥ ಗ್ರಾಮಕ್ಕೆ ಮಂಜೂರಾದ ಅಂಬೇಡ್ಕರ್ ಭವನವನ್ನು ಸಮುದಾಯ ಭವನಗಳಿಲ್ಲದ ಪಾಲೇದುವಿನಲ್ಲಿ ನಿರ್ಮಿಸುವಂತೆ ಸದಸ್ಯರಿಂದ ಒತ್ತಾಯ ಕೇಳಿ ಬಂದಾಗ, ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು, ಪಾಲೇದುವಿನಲ್ಲಿರುವ ಸರಕಾರಿ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಇಲಾಖೆಗಳ ಒಪ್ಪಿಗೆ ಸಿಕ್ಕಿದರೆ ಅಲ್ಲಿಯೇ ಅಂಬೇಡ್ಕರ್ ಭವನ ನಿರ್ಮಿಸುವ ಕುರಿತು ನಿರ್ಧರಿಸಲಾಯಿತು.

ಕೆರೆ ಹೂಳೆತ್ತಲು ಈ ಬಾರಿಯೂ ಸರಕಾರ ಸುತ್ತೋಲೆ ಕಳುಹಿಸಿದ್ದು, ಕೆರೆಗಳ ಪಟ್ಟಿ ನೀಡುವಂತೆ ಕೇಳಿರುವ ವಿಷಯವಾಗಿ ಸಭೆಯಲ್ಲಿ ಚರ್ಚೆ ನಡೆದು, ಈ ಹಿಂದೆಯೇ ಕೆರೆಗಳ ಹೂಳೆತ್ತಲು ಗ್ರಾಮ ವ್ಯಾಪ್ತಿಯಲ್ಲಿರುವ ಕೆರೆಗಳ ಪಟ್ಟಿ ಕಳುಹಿಸಲಾಗಿದೆ. ಆದರೆ ಅನುದಾನ ಮಾತ್ರ ಬಂದಿಲ್ಲ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಈ ಬಾರಿಯೂ ಕೆರೆಗಳ ಪಟ್ಟಿ ಕಳುಹಿಸಲು ನಿರ್ಧರಿಸಿದರಲ್ಲದೆ, ಈ ಪಟ್ಟಿಗೆ ಶೀಘ್ರವೇ ಮಾನ್ಯತೆ ನೀಡಿ ಅನುದಾನ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಪಂಚಾಯತ್‌ಗೆ ಪತ್ರ ಬರೆಯಲು ಸಭೆಯಲ್ಲಿ ನಿರ್ಣಯ ಕೈಗೊಂಡು, ಕರಾಯದಲ್ಲಿ ಒತ್ತುವರಿಯಾಗಿರುವ ಖಾಸಗಿ ಕೆರೆಯನ್ನು ತೆರವುಗೊಳಿಸಿ ಕೊಡುವಂತೆ ಕಂದಾಯ ಇಲಾಖೆಗೆ ಪತ್ರ ಬರೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಜಯವಿಕ್ರಮ್ ತನ್ನ ಪ್ರತಿ ತಿಂಗಳ ಗೌರವ ಧನವನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡವರಿಗೆ ನೀಡಲು ತಿಳಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಗೌರವಧನವನ್ನು ಅನಾರೋಗ್ಯದಿಂದಿರುವ ವಿಧವೆ ಪುಷ್ಪಾರಿಗೆ ನೀಡಲಾಯಿತು.

ಸಭೆಯಲ್ಲಿ ತಣ್ಣೀರುಪಂಥ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ಕೇಶವ ನಾಯ್ಕ, ಸದಸ್ಯರಾದ ಶಾಲೆಟ್ ವಾಸ್, ಅಯೂಬ್ ಡಿ.ಕೆ., ಆದಂ, ಸೂರಪ್ಪ ಬಂಗೇರ, ಅಬ್ದುರ್ರಹ್ಮಾನ್, ನವೀನ್ ಕುಮಾರ್, ಗೀತಾ, ಮೈಮೂನಾ, ಮಮತಾ, ಸದಾನಂದ ಶೆಟ್ಟಿ, ಗೀತಾ ಕೆ. ಉಪಸ್ಥಿತರಿದ್ದು, ಚರ್ಚೆಯಲ್ಲಿ ಭಾಗವಹಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಅರ್ಜಿ ವಿಲೇಗೊಳಿಸಿದರು. ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ಟಿನ್ ಡಿಸೋಜ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X