Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾನೂನಿಗೆ ಗೌರವ ನೀಡದೆ ಹಿಂಸೆಯ ಹಾದಿ...

ಕಾನೂನಿಗೆ ಗೌರವ ನೀಡದೆ ಹಿಂಸೆಯ ಹಾದಿ ಹಿಡಿದಿರುವ ಸಂಘ ಪರಿವಾರ: ಮುಸ್ಲಿಂ ಒಕ್ಕೂಟ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Sept 2016 10:26 PM IST
share

 ಮಡಿಕೇರಿ, ಸೆ.2: ಜಿಲ್ಲೆಯಲ್ಲಿ ಸಂಘ ಪರಿವಾರ ಕಾನೂನಿಗೆ ಗೌರವ ನೀಡದೆ ಹಿಂಸೆಯ ಹಾದಿ ತುಳಿಯುವ ಮೂಲಕ ಅಶಾಂತಿಯ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂದು ಕೊಡಗು ಜಿಲ್ಲಾ ಮುಸ್ಲಿಂ ಒಕ್ಕೂಟ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಹಾಗೂ ಎಸ್‌ಡಿಪಿಐ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಚ್. ಅಬ್ದುಲ್ ಮಜೀದ್, ಕೊಡಗನ್ನು ಗುಜರಾತ್ ಮಾಡುವುದಾಗಿ ಸಂಘ ಪರಿವಾರ ನೀಡಿರುವ ಹೇಳಿಕೆ ಖಂಡನೀಯವೆಂದರು. ಆ.14 ರಂದು ಪಂಜಿನ ಮೆರವಣಿಗೆ ಸಂದರ್ಭ ಮಸೀದಿ ಮೇಲೆ ನಡೆದ ಕಲ್ಲು ತೂರಾಟ, ಬಳಿಕ ನಡೆದ ಪ್ರವೀಣ್ ಹತ್ಯೆ ಪ್ರಕರಣ, ದೇಣಿಗೆ ಸಂಗ್ರಹಿಸುತ್ತಿದ್ದ ಮೌಲವಿಯನ್ನು ಇರಿದ ಪ್ರಕರಣ, ಗೋಮಾಂಸದ ಹೆಸರಿನಲ್ಲಿ ಮಡಿಕೇರಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಲಗೇಜ್ ರೂಮ್ ಗುತ್ತಿಗೆದಾರನ ಮೇಲೆ ನಡೆದ ಹಲ್ಲೆ ಪ್ರಕರಣ, ಕುಶಾಲನಗರದ ಅನ್ವರ್‌ಉಲ್-ವುದಾ ವಿದ್ಯಾ ಸಂಸ್ಥೆಯ ಮಕ್ಕಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಒಕ್ಕೂಟ ಖಂಡಿಸುವುದಾಗಿ ತಿಳಿಸಿದರು. ಶಾಂತಿ ಸೌಹಾರ್ದಕ್ಕೆ ಹೆಸರಾಗಿರುವ ಕೊಡಗು ಜಿಲ್ಲೆಯನ್ನು ಎಂದಿಗೂ ಗುಜರಾತ್ ಆಗಲು ಬಿಡುವುದಿಲ್ಲವೆಂದ ಅಬ್ದುಲ್ ಮಜೀದ್, ಆಟೊ ಚಾಲಕ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾಗಿದ್ದರೂ ಬಿಜೆಪಿ ಹಾಗೂ ಸಂಘ ಪರಿವಾರ ಮತ್ತೆ ಪ್ರತಿಭಟನೆ ನಡೆಸುವ ಮೂಲಕ ಅಶಾಂತಿ ಸೃಷ್ಟಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಟಿಪ್ಪು ಜಯಂತಿ ಸಂದರ್ಭ ನಡೆದ ಅಮಾಯಕ ಶಾಹುಲ್ ಹಮೀದ್ ಹತ್ಯೆ ಪ್ರಕರಣ ಹಾಗೂ ಇತ್ತೀಚೆಗೆ ಕುಶಾಲನಗರದಲ್ಲಿ ಮೌಲವಿಗೆ ಇರಿದ ಪ್ರಕರಣ ಜೀವಂತವಾಗಿರುವಾಗಲೇ ಯಾವ ನೈತಿಕತೆಯ ಆಧಾರದಲ್ಲಿ ಸಂಘ ಪರಿವಾರ ಕಾವೇರಿ ನೆಲೆಬೀಡಲ್ಲಿ ರಕ್ತ ಹರಿಸುವುದಿಲ್ಲವೆಂದು ಹೇಳಿಕೆ ನೀಡುತ್ತಿದೆ ಎಂದು ಅಬ್ದುಲ್ ಮಜೀದ್ ಪ್ರಶ್ನಿಸಿದರು.

ಗೋಮಾಂಸದ ವಿಚಾರದಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ನಡುವೆ ದ್ವಂದ್ವ ನಿಲುವುಗಳಿದ್ದು, ಕೇಂದ್ರದ ಬಿಜೆಪಿ ಮುಖಂಡರೊಬ್ಬರು ದೇಶದಲ್ಲಿ ಶೇ.50 ರಷ್ಟು ಮಂದಿ ಗೋಮಾಂಸ ಸೇವಿಸುತ್ತಾರೆ, ಸೇವಿಸುವವರು ಸೇವಿಸಲಿ ಎಂದು ಕರೆ ನೀಡಿದ್ದಾರೆ. ಅಲ್ಲದೆ, ಗೋಮಾಂಸ ನಿಷೇಧವಿರುವ ರಾಜ್ಯಗಳಲ್ಲಿ ನಿಷೇಧವನ್ನು ತೆರವುಗೊಳಿಸಬೇಕೆಂದು ಹೇಳಿದ್ದಾರೆ. ಆದರೆ ಸಂಘ ಪರಿವಾರ ಗೋಮಾಂಸದ ವಿಚಾರದಲ್ಲಿ ದಲಿತರು, ಅಲ್ಪಸಂಖ್ಯಾತರ ಮೇಲೆ ಮಾತ್ರವಲ್ಲದೆ, ಉಡುಪಿಯ ಪ್ರವೀಣ್ ಪೂಜಾರಿಯ ಮೇಲೂ ದಾಳಿ ನಡೆಸುವ ಮೂಲಕ ನೈಜ ದೌರ್ಜನ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು. ಇಡೀ ವಿಶ್ವದಲ್ಲಿ ಗೋಮಾಂಸ ರಫ್ತಿನಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಅಲ್ಲದೆ, ಬಿಜೆಪಿ ಶಾಸಕರೇ ಗೋಮಾಂಸ ರಫ್ತಿನ ಮಾಲಕರಾಗಿದ್ದಾರೆ. ದೇಶದಿಂದ 2,82,000 ಮೆಟ್ರಿಕ್ ಟನ್‌ನಷ್ಟು ಗೋಮಾಂಸ ರಫ್ತಾಗುತ್ತಿದ್ದರೂ ಇದನ್ನು ತಡೆಯದೆ ಅಮಾಯಕರ ಮೇಲೆ ಸಂಘ ಪರಿವಾರ ಯಾಕೆ ದಾಳಿ ನಡೆಸುತ್ತಿದೆ ಎಂದು ಅಬ್ದುಲ್ ಮಜೀದ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X