Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಝಹೀರ್‌ಖಾನ್‌ಗೆ ಎಂಸಿಸಿ ಗೌರವ ಆಜೀವ...

ಝಹೀರ್‌ಖಾನ್‌ಗೆ ಎಂಸಿಸಿ ಗೌರವ ಆಜೀವ ಸದಸ್ಯತ್ವ

ವಾರ್ತಾಭಾರತಿವಾರ್ತಾಭಾರತಿ2 Sept 2016 11:30 PM IST
share
ಝಹೀರ್‌ಖಾನ್‌ಗೆ ಎಂಸಿಸಿ ಗೌರವ ಆಜೀವ ಸದಸ್ಯತ್ವ

ಲಂಡನ್, ಸೆ.2: ಭಾರತದ ಮಾಜಿ ವೇಗದ ಬೌಲರ್ ಝಹೀರ್ ಖಾನ್‌ರನ್ನು ಮ್ಯಾರಿಲ್‌ಬಾನ್ ಕ್ರಿಕೆಟ್ ಕ್ಲಬ್‌ನ(ಎಂಸಿಸಿ) ಗೌರವ ಆಜೀವ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಝಹೀರ್ ಈ ಗೌರವಕ್ಕೆ ಪಾತ್ರರಾಗುತ್ತಿರುವ ಭಾರತದ 24ನೆ ಕ್ರಿಕೆಟಿಗನಾಗಿದ್ದಾರೆ.

ಝಹೀರ್ ಖಾನ್‌ರನ್ನು ಕ್ಲಬ್‌ನ ಗೌರವ ಆಜೀವ ಸದಸ್ಯರನ್ನಾಗಿ ಎಂಸಿಸಿ ಆಯ್ಕೆ ಮಾಡಿದೆ ಎಂದು ಕ್ಲಬ್ ಪ್ರಕಟನೆಯೊಂದರಲ್ಲಿ ತಿಳಿಸಿದೆ.

ಕಳೆದ ತಿಂಗಳು ಭಾರತದ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಎಂಸಿಸಿ ಗೌರವ ಆಜೀವ ಸದಸ್ಯರಾಗಿ ಆಯ್ಕೆಯಾಗಿದ್ದು, ಇದೀಗ ಝಹೀರ್ ಕೂಡ ಈ ಗೌರವಕ್ಕೆ ಭಾಜನರಾಗಿದ್ದಾರೆ. ಈ ಹಿಂದೆ ಸುನೀಲ್ ಗವಾಸ್ಕರ್ ಹಾಗೂ ಸಚಿನ್ ತೆಂಡುಲ್ಕರ್ ಕೂಡ ಈ ಗೌರವಕ್ಕೆ ಭಾಜನರಾಗಿದ್ದರು.

  ತನ್ನ ಯಶಸ್ವಿ ವೃತ್ತಿಜೀವನದಲ್ಲಿ ಭಾರತ ತಂಡದಲ್ಲಿ 92 ಟೆಸ್ಟ್ ಪಂದ್ಯಗಳನ್ನು ಆಡಿರುವ ಝಹೀರ್ ಒಟ್ಟು 311 ವಿಕೆಟ್‌ಗಳನ್ನು ಪಡೆದಿದ್ದರು. ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲೂ ತನ್ನ ಛಾಪು ಮೂಡಿಸಿದ್ದ ಝಹೀರ್ 200 ಏಕದಿನಗಳಲ್ಲಿ 282 ವಿಕೆಟ್‌ಗಳನ್ನು ಕಬಳಿಸಿದ್ದರು. ಐತಿಹಾಸಿಕ ಲಾರ್ಡ್ಸ್ ಸ್ಟೇಡಿಯಂನಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದ ಝಹೀರ್ ಕೂದಲೆಳೆ ಅಂತರದಿಂದ ಲಾರ್ಡ್ಸ್ ಗೌರವ ಮಂಡಳಿಯಲ್ಲಿ ಸ್ಥಾನ ವಂಚಿತರಾಗಿದ್ದರು.

2000ರಲ್ಲಿ ಏಕದಿನ ಪಂದ್ಯಕ್ಕೆ ಕಾಲಿಟ್ಟಿದ್ದ ಝಹೀರ್ ಲಾರ್ಡ್ಸ್ ಕ್ರೀಡಾಂಗಣದಲ್ಲಿ 2002ರ ನಾಟ್‌ವೆಸ್ಟ್ ಸರಣಿ ಸಹಿತ ಒಟ್ಟು 3 ಏಕದಿನ ಪಂದ್ಯಗಳನ್ನು ಆಡಿದ್ದರು.

2015ರಲ್ಲಿ ಅಂತಾರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದ ಝಹೀರ್ ಐಪಿಎಲ್‌ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರು.

‘‘ಭಾರತದಲ್ಲಿ ಝಹೀರ್‌ಖಾನ್ ಉತ್ತಮ ಕ್ರಿಕೆಟ್ ಸೇವಕನಾಗಿದ್ದರು. ಹಲವಾರು ವರ್ಷಗಳ ಕಾಲ ಆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಕಾರಣಕ್ಕಾಗಿ ಅವರಿಗೆ ಕ್ಲಬ್‌ನ ಗೌರವ ಆಜೀವ ಸದಸ್ಯತ್ವ ನೀಡಲು ನಮಗೆ ಸಂತೋಷವಾಗುತ್ತಿದೆ’’ಎಂದು ಎಂಸಿಸಿ ಹೆಡ್ ಆಫ್ ಕ್ರಿಕೆಟ್‌ನ ಜಾನ್ ಸ್ಟೀಫನ್‌ಸನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X