Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮಾಜಿಕ ಜಾಲತಾಣದಲ್ಲಿ ದೇವರ ಅವಹೇಳನ:...

ಸಾಮಾಜಿಕ ಜಾಲತಾಣದಲ್ಲಿ ದೇವರ ಅವಹೇಳನ: ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ3 Sept 2016 6:53 PM IST
share

ಪುತ್ತೂರು,ಸೆ.3: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಬಗ್ಗೆ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಮಾಡಿ ತಕ್ಕ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಧರ್ಮ ಜಾಗೃತಿ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು ಎಚ್ಚರಿಸಿದ್ದಾರೆ. ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಫೇಸ್‌ಬುಕ್‌ನಲ್ಲಿ ಧಾರ್ಮಿಕ ವಿಚಾರವಾಗಿ ಅವಹೇಳನಕಾರಿಯಾದ ಚಿತ್ರಗಳು ಮತ್ತು ಬರವಣಿಗೆಗಳು ರವಾನೆಯಾಗುತ್ತಿದ್ದು, ಧಾರ್ಮಿಕ ನಂಬಿಕೆಗೆ ಧಕ್ಕೆಯನ್ನುಂಟು ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಕಟೀಲು ದುರ್ಗಾಪರಮೇಶ್ವರಿ ದೇವಿಯ ಕುರಿತು ಅವಹೇಳನ ಮಾಡಿರುವ ಕುರಿತು ಭಾನುವಾರ ಕಟೀಲಿನಲ್ಲಿ ಜಿಲ್ಲಾಮಟ್ಟದ ಪ್ರಮುಖರ ಸಭೆ ನಡೆಯಲಿದೆ. ಆ ಸಬೆಯಲ್ಲಿ ಕೈಗೊಳ್ಳಲಾಗುವ ತೀರ್ಮಾನದ ಮೇಲೆ ಮುಂದೆ ಪುತ್ತೂರಿನಲ್ಲಿ ಹೋರಾಟ ಪ್ರಾರಂಭವಾಗಲಿದೆ ಎಂದು ಹೇಳಿದರು.  ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಅವರು ಮಾತನಾಡಿ ಈ ಹಿಂದೆಯೂ ಹಿಂದೂ ದೇವತೆಗಳ ಚಿತ್ರಗಳನ್ನು ಕೆಳಮಟ್ಟದಲ್ಲಿ ಚಿತ್ರಿಸಿ ಅವಹೇಳನ ಮಾಡಿರುವ ವಿಚಾರಗಳು ಎಲ್ಲರಿಗೂ ತಿಳಿದ ವಿಚಾರವೇ ಆಗಿದೆ. ಆದರೆ ಆ ಸಮಯದಲ್ಲಿಲ್ಲೇ ತಪಿತಸ್ಥತರಿಗೆ ಸರಿಯಾದ ಕಠಿಣ ಶಿಕ್ಷೆ ವಿಧಿಸುತ್ತಿದ್ದರೆ ಇಂತಹ ಘಟನೆ ಮತ್ತೊಮ್ಮೆ ಮರುಕಳಿಸುತ್ತಿರಲಿಲ್ಲ. ಪೊಲೀಸ್ ಇಲಾಖೆ ಪಾರದರ್ಶಕವಾಗಿ ತನ್ನ ಕರ್ತವ್ಯವನ್ನು ನಿಭಾಯಿಸಿದಲ್ಲಿ ಇಂತಹ ಪ್ರಕರಣಗಳು ನಡೆಯಲು ಸಾಧ್ಯವಿಲ್ಲ ಎಂದ ಅವರು ಧರ್ಮವನ್ನು ಕೆಣಕುವುದು ಮುಂದೊಂದು ದಿನ ದೊಡ್ಡ ಹೊಡೆತಕ್ಕೆ ಕಾರಣವಾಗಲಿದೆ ಎಂದು ಎಚ್ಚರಿಸಿದರು.

 ಸುದ್ದಿಗೋಷ್ಠಿಯಲ್ಲಿ ಧರ್ಮಜಾಗೃತಿ ಸಮಿತಿ ಸದಸ್ಯ ರಾಜೇಶ್ ಬನ್ನೂರು, ಬಜರಂಗದಳ ಮಂಗಳೂರು ವಿಭಾಗ ಸುರಕ್ಷಾ ಮಂಡಳಿ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ಹಿಂದೂ ಜಾಗರಣಾ ವೇದಿಕೆಯ ಪುತ್ತೂರು ತಾಲ್ಲೂಕು ಅಧ್ಯಕ್ಷ ಅಜಿತ್ ರೈ ಹೊಸಮನೆ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X