ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ

ಪುತ್ತೂರು,ಸೆ.3: ಪುತ್ತೂರಿನ ರೋಟರಿ ಕ್ಲಬ್ ಮತ್ತು ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಶುಕ್ರವಾರ ರೋಟರಿ ಜಿ.ಎಲ್. ಸಭಾಭವನದಲ್ಲಿ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್‌ನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದ ಗೌಡ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಡಾ. ಅಶೋಕ್ ಪಡಿವಾಳ್, ಕಾರ್ಯದರ್ಶಿ ಎ.ಜೆ.ರೈ, ಡಾ. ಜೆ.ಸಿ. ಅಡಿಗ, ಯುವಜನ ಸೇವಾ ವಿಭಾಗದ ನಿರ್ದೇಶಕ ಪರಮೇಶ್ವರ ಗೌಡ, ಕಾರ್ಯಕ್ರಮ ಸಂಯೋಜಕ ವಕೀಲ ಚಿದಾನಂದ ಬೈಲಾಡಿ, ಇನ್ನರ್‌ವ್ಹೀಲ್ ಅಧ್ಯಕ್ಷೆ ಲಲಿತಾ ಭಟ್, ಕಾರ್ಯದರ್ಶಿ ಟೈನಿ ದೀಪಕ್ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ತಾಲೂಕಿನ 16 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
Next Story





