Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಝ್ಬೆಕ್: ಇಸ್ಲಾಮ್ ಕರಿಮೊವ್...

ಉಝ್ಬೆಕ್: ಇಸ್ಲಾಮ್ ಕರಿಮೊವ್ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ3 Sept 2016 8:41 PM IST
share
ಉಝ್ಬೆಕ್: ಇಸ್ಲಾಮ್ ಕರಿಮೊವ್ ಅಂತ್ಯಕ್ರಿಯೆ

ಸಮರ್‌ಕಂಡ್ (ಉಝ್ಬೆಕಿಸ್ತಾನ), ಸೆ. 3: ಮೆದುಳಿನ ರಕ್ತಸ್ರಾವದಿಂದಾಗಿ ಮೃತಪಟ್ಟಿರುವ ಉಝ್ಬೆಕಿಸ್ತಾನದ ಅಧ್ಯಕ್ಷ ಇಸ್ಲಾಮ್ ಕರಿಮೊವ್‌ರ ಅಂತ್ಯಕ್ರಿಯೆ ಇಂದು ಭಾರೀ ಭದ್ರತೆಯ ನಡುವೆ ನಡೆಯಿತು.
78 ವರ್ಷದ ‘ಉಕ್ಕಿನ ಮನುಷ್ಯ’ನ ಖಚಿತ ಉತ್ತರಾಧಿಕಾರಿಯಾಗಿ ಯಾರೂ ಹೊರಹೊಮ್ಮದಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಸೋವಿಯತ್ ನಂತರದ ಇತಿಹಾಸದಲ್ಲೇ ಅತ್ಯಂತ ಅನಿಶ್ಚಿತ ಪರಿಸ್ಥಿತಿ ನೆಲೆಸಿದೆ.

ಕಳೆದ ಶನಿವಾರ ಮೆದುಳಿನ ರಕ್ತಸ್ರಾವಕ್ಕೀಡಾಗಿದ್ದ ಕರಿಮೊವ್, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅಧಿಕಾರಿಗಳು ಅವರ ಸಾವನ್ನು ಶುಕ್ರವಾರ ರಾತ್ರಿ ಘೋಷಿಸಿದರು. ಇದಕ್ಕೂ ಮುನ್ನ, ದೇಶದ ಮುಖ್ಯಸ್ಥನ ಸಾವಿನ ಸುದ್ದಿಯನ್ನು ಘೋಷಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂಬ ಊಹಾಪೋಹಗಳು ಹಲವು ದಿನಗಳಿಂದ ಕೇಳಿಬರುತ್ತಿದ್ದವು.

ಮಾಜಿ ಸೋವಿಯತ್ ಒಕ್ಕೂಟದ ದೇಶವನ್ನು 27 ವರ್ಷಗಳ ಕಾಲ ಆಳಿದ ಬಲಾಢ್ಯನ ಅಂತ್ಯ ಸಂಸ್ಕಾರವನ್ನು ನೈರುತ್ಯ ಉಝ್ಬೆಕಿಸ್ತಾನದಲ್ಲಿರುವ ಅವರ ಸ್ವಗ್ರಾಮ ಸಮರ್‌ಕಂಡ್‌ನಲ್ಲಿ ಶನಿವಾರ ನಡೆಯಿತು.

ಅವರ ಸಾವಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಮೂರು ದಿನಗಳ ಶೋಕಾಚರಣೆಯನ್ನು ನಡೆಸಲಾಗುತ್ತಿದೆ.
ರಾಜಧಾನಿ ತಾಶ್ಕೆಂಟ್‌ನಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆಯಲ್ಲಿ ಒಯ್ದೆಗ ಜನರು ರಸ್ತೆಯಲ್ಲಿ ಸಾಲುಗಟ್ಟಿ ನಿಂತು ಹೂವುಗಳನ್ನು ಎಸೆದರು.
ರಶ್ಯ ಪ್ರಧಾನಿ ಡಿಮಿಟ್ರಿ ಮೆಡ್ವೆಡೆವ್, ಮಾಜಿ ಸೋವಿಯತ್ ರಿಪಬ್ಲಿಕ್‌ಗಳ ನಾಯಕರಾದ ತಜಿಕಿಸ್ತಾನದ ಅಧ್ಯಕ್ಷ ಎಮೊಮಲಿ ರಖ್‌ಮಾನ್, ತುರ್ಕ್‌ಮೆನಿಸ್ತಾನದ ಅಧ್ಯಕ್ಷ ಗುರುಬಂಗುಲಿ ಬರ್ಡಿಮುಖಮೆಡೊವ್ ಹಾಗೂ ಕಿರ್ಗಿಸ್ತಾನ್, ಬೆಲಾರುಸ್ ಮತ್ತು ಕಝಕ್‌ಸ್ತಾನ್‌ಗಳ ಪ್ರಧಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಉಝ್ಬೆಕ್ ಕಾನೂನಿನ ಪ್ರಕಾರ, ಚುನಾವಣೆ ನಡೆಯುವವರೆಗೆ ಸೆನೆಟ್ ಮುಖ್ಯಸ್ಥ ನಿಗ್ಮತುಲ್ಲಾ ಯುಲ್ಡಶೆವ್ ದೇಶದ ಉಸ್ತುವಾರಿ ಅಧ್ಯಕ್ಷರಾಗಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X