ಶೌಚಾಲಯದಲ್ಲಿ ಕ್ಯಾಮರಾ: ತನಿಖೆ ಚುರುಕು
ಮಂಗಳೂರು, ಸೆ.3: ಮಂಗಳೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮರಾ ಮೂಲಕ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ತನಿಖೆಗಾಗಿ ಮೊಬೈಲನ್ನು ಬೆಂಗಳೂರು ಸೈಬರ್‌ಕ್ರೈಂಗೆ ಪೊಲೀಸರು ಕಳುಹಿಸಿದ್ದಾರೆ. ಮಂಗಳೂರು ದಕ್ಷಿಣ ವಲಯ ಎಸಿಪಿ ಶೃತಿ ನೇತೃತ್ವದ ತಂಡ ಪ್ರಕರಣದ ಕುರಿತಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಈಗಾಗಲೇ ವಿಶ್ವವಿದ್ಯಾನಿಲಯದ ಮೂವರು ವಿದ್ಯಾರ್ಥಿಗಳು ಮತ್ತು ಕೆಲವು ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸ ಲಾಗಿದೆ ಎಂದು ತಿಳಿದು ಬಂದಿದೆ.
Next Story





