ಸಂದೀಪ್ ಕುಮಾರ್ ಅಮಾನತು
ಹೊಸದಿಲ್ಲಿ,ಸೆ.3: ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಸೀಡಿ ಬಹಿರಂಗಗೊಂಡ ಬಳಿಕ ದಿಲ್ಲಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹುದ್ದೆಯಿಂದ ವಜಾಗೊಂಡಿರುವ ಸಂದೀಪ್ ಕುಮಾರ್ ಅವರನ್ನು ಆಪ್ ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.
ಪಕ್ಷವು ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಕುಮಾರ್ ಮಾಡಿರುವುದು ಸಂಪೂರ್ಣ ತಪ್ಪು ಕೆಲಸವಾಗಿದೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಅಮಾನತುಗೊಳಿಸಲಾಗಿದೆ. ವಿಷಯವನ್ನು ಶಿಸ್ತು ಸಮಿತಿಗೆ ಒಪ್ಪಿಸಲಾಗಿದ್ದು, ಅದು ಕೈಗೊಳ್ಳುವ ನಿರ್ಧಾರಕ್ಕೆ ಪಕ್ಷವು ಬದ್ಧವಾಗಿರುತ್ತದೆ ಎಂದು ದಿಲ್ಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದರು.
Next Story





